ಹಾವೇರಿ: ಫಸಲಿಗೆ ಬಂದಿದ್ದ 700 ಅಡಿಕೆ ಮರಗಳನ್ನು ರಾತ್ರೋರಾತ್ರಿ ದುಷ್ಕರ್ಮಿಗಳು ಕಡಿದು ಹಾಕಿರುವ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಬಾಳಂಬೀಡ ಗ್ರಾಮದಲ್ಲಿ ನಡೆದಿದೆ.
Advertisement
ಗ್ರಾಮದ ರೈತ ಖಲೀಲ್ ಅಹಮ್ಮದ್ ವಾಲೀಕಾರ ಎಂಬವರಿಗೆ ಸೇರಿದ ಒಂದೂವರೆ ಎಕರೆ ಜಮೀನಿನಲ್ಲಿದ್ದ ಅಡಿಕೆ ಮರಗಳನ್ನು ಕಡಿದು ದುಷ್ಕರ್ಮಿಗಳು ವಿಕೃತಿ ಮೆರೆದಿದ್ದಾರೆ. 700 ಕ್ಕೂ ಅಧಿಕ ಅಡಿಕೆ ಮರಗಳನ್ನು ಕಡಿದು ದುಷ್ಕರ್ಮಿಗಳು ಪರಾರಿಯಾಗಿದ್ದು, ಜಮೀನಿನಲ್ಲಿ ಯಾರೂ ಇಲ್ಲದ್ದನ್ನು ನೋಡಿಕೊಂಡು ರಾತ್ರೋರಾತ್ರಿ ಕಡಿದು ಹಾಕಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಖಲೀಲ್ ಅಹಮ್ಮದ್ ವಾಲೀಕಾರ ಆರು ವರ್ಷಗಳಿಂದ ಕಷ್ಟಪಟ್ಟು ಅಡಿಕೆ ಮರಗಳನ್ನು ಬೆಳೆಸಿದ್ದರು, ಇನ್ನೇನು ಫಸಲು ಕೊಡಬೇಕು ಎನ್ನುವಷ್ಟರಲ್ಲಿ ಅಡಿಕೆ ಮರಗಳನ್ನು ದುಷ್ಕರ್ಮಿಗಳು ಕಡಿದು ಹಾಕಿದ್ದಾರೆ. ಇದನ್ನೂ ಓದಿ: ಕೋವಿಡ್ ಭೀತಿ ಮರೆತು ಕೋಟೆನಾಡಲ್ಲಿ ಮಟನ್ ಖರೀದಿಸಲು ಮುಗಿಬಿದ್ದ ಮಾಂಸ ಪ್ರಿಯರು
Advertisement
Advertisement
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಡೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ರೈತನ ಕುಟುಂಬ ಸದಸ್ಯರು ಅಡಿಕೆಯ ಮರಗಳ ಸ್ಥಿತಿ ನೋಡಿ ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ: ಭೀಮಾ ನದಿ ಪ್ರವಾಹ ಆತಂಕ – ನದಿ ತೀರಕ್ಕೆ ತೆರಳದಂತೆ ಡಿಸಿ ರಾಗಪ್ರಿಯಾ ಸೂಚನೆ
Advertisement