ಬೆಂಗಳೂರು: ಎಲಿಸ್ ಪೆರ್ರಿಯ ಭರ್ಜರಿ ಫಿಫ್ಟಿ ಆಟಕ್ಕೆ ಆರ್‌ಸಿಬಿ, ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 148 ರನ್‌ಗಳ ಗೆಲುವಿನ ಗುರಿಯನ್ನು ನೀಡಿದೆ.
ಇಂದು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದಲ್ಲಿ ಟಾಸ್ ಸೋತು ಮೊದಲ ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 147 ರನ್ ಗಳಿಸಿ, ಡೆಲ್ಲಿಗೆ 148 ರನ್ ಗಳ ಗುರಿಯನ್ನು ನೀಡಿತು.ಇದನ್ನೂ ಓದಿ: Champions Trophy: ಸೋತ ಇಂಗ್ಲೆಂಡ್ ಟೂರ್ನಿಯಿಂದ ಔಟ್ – ಗೆದ್ದ ದ. ಆಫ್ರಿಕಾ ಸೆಮಿಗೆ ಎಂಟ್ರಿ
ಆರ್‌ಸಿಬಿ ತಂಡದ ಸ್ಮೃತಿ ಮಂಧಾನ 8 ರನ್ ಗಳಿಗೆ ಔಟ್ ಆಗಿ ಆರಂಭದಲ್ಲಿ ನಿರಾಸೆ ಮೂಡಿಸಿದರು. ಎರಡನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಡ್ಯಾನಿ ವ್ಯಾಟ್ 18 ಎಸೆತಗಳಲ್ಲಿ 21 ರನ್ ಗಳಿಸಿ ಔಟಾದರು. ಮೊದಲ 2 ಪಂದ್ಯಗಳಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ್ದ ಪೆರ್ರಿ, ಗುಜರಾತ್ ವಿರುದ್ಧದ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದರು. ಇಂದು ಮತ್ತೆ ಫಾರ್ಮ್‌ಗೆ ಬಂದ ಪೆರ್ರಿ ಭರ್ಜರಿ 3 ಸಿಕ್ಸ್, 3 ಬೌಂಡರಿ ಬಾರಿಸಿ 47 ಎಸೆತಗಳಲ್ಲಿ 60 ರನ್‌ಗಳಿಸಿದರು. ಪೆರ್ರಿಗೆ ಜೊತೆಯಾದ ರಾಘ್ವಿ ಬಿಸ್ಟ್ 32 ಎಸೆತಗಳಲ್ಲಿ 33 ರನ್ ಗಳಿಸಿದರು.
ಇನ್ನುಳಿದಂತೆ ರಿಚಾ ಘೋಷ್ 5, ಕನಿಕಾ ಅಹುಜಾ 2 ಹಾಗೂ ಜಾರ್ಜಿಯಾ 12 ರನ್ ಗಳಿಸಿದರು. ಡೆಲ್ಲಿ ಪರ ಬೌಲಿಂಗ್ ಮಾಡಿದ ಶಿಖಾ ಹಾಗೂ ಚರಣಿ ತಲಾ 2 ವಿಕೆಟ್ ಪಡೆದುಕೊಂಡರೆ. ಕಪ್ಪ್ 1 ವಿಕೆಟ್ ಪಡೆದುಕೊಂಡರು.ಇದನ್ನೂ ಓದಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಬೆಲೆ 6 ರೂ. ಏರಿಕೆ