ಬಾಗಲಕೋಟೆ: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ, ಮಕ್ಕಳಿಗೆ ಬೆಂಕಿ ಹಚ್ಚಿ ಬಳಿಕ ತಾನೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ನೆಲವಗಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಬಸಪ್ಪ ಕುಟುಂಬದೊಂದಿಗೆ ಆತ್ಮಹತ್ಯೆಗೆ ಮುಂದಾದ ವ್ಯಕ್ತಿ. ಘಟನೆಯಲ್ಲಿ ಪತ್ನಿ ನಿಮ9ಲಾ ಮತ್ತು ಮಕ್ಕಳಾದ ಸವಿತಾ ಮತ್ತು ರಾಹುಲ್ ಬದುಕುಳಿದಿದ್ದಾರೆ. ಆದ್ರೆ ಬಸಪ್ಪ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
Advertisement
ಪಾನಮತ್ತರಾಗಿದ್ದ ಬಸಪ್ಪ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಮನೆ ಮಂದಿ ಜೊತೆ ತಾನೂ ಸಾಮೂಹಿಕ ಆತ್ಮಹತ್ಯೆಗೆ ಮುಂದಾಗಿದ್ದಾರೆ. ಪತ್ನಿ, ಮಕ್ಕಳಿಗೆ ಬೆಂಕಿ ಹಚ್ಚಿ ತಾನು ಬೆಂಕಿ ಹಚ್ಚಿಕೊಂಡಿದ್ದಾರೆ. ಪತ್ನಿ, ಮಕ್ಕಳ ಚೀರಾಟ ಕೇಳಿ ತಕ್ಷಣ ಅಕ್ಕಪಕ್ಕದ ಮನೆಯವರು ಬಂದು ರಕ್ಷಣೆ ಮಾಡಿದ್ದಾರೆ.
Advertisement
ಸ್ಥಳೀಯರ ಸಮಯಪ್ರಜ್ಞೆಯಿಂದ ಬಸಪ್ಪನ ಪತ್ನಿ, ಮಕ್ಕಳು ಬದುಕುಳಿದಿದ್ದಾರೆ. ಗಾಯಾಳುಗಳನ್ನು ಬಾಗಲಕೋಟೆಯ ನವನಗರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ವಿಚಾರಣೆ ಬಳಿಕವಷ್ಟೇ ಸ್ಪಷ್ಟವಾಗಬೇಕಿದೆ.
Advertisement
ಬಾದಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲಿಸರು ಪರಿಶೀಲನೆ ನಡೆಸಿದ್ದಾರೆ.