ಮಡಿಕೇರಿ: ದುಬೈನಿಂದ ಬಂದಿದ್ದ ವ್ಯಕ್ತಿಗೆ ಕೊರೊನಾ ಸೋಂಕಿನ ಲಕ್ಷಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ವ್ಯಕ್ತಿಗೆ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ದುಬೈನಿಂದ ಬಂದ 30 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಕಾಣಿಸಿಕೊಂಡಿದೆ. ವ್ಯಕ್ತಿಗೆ ಗಂಟಲು ಕೆರೆತ, ನೆಗಡಿ, ಜ್ವರ ಕಾಣಿಸಿಕೊಂಡಿರುವುದರಿಂದ ಆಸ್ಪತ್ರೆಗೆ ತೋರಿಸಲು ಬಂದವನನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ.
Advertisement
Advertisement
ಸದ್ಯ ಶಂಕಿತ ವ್ಯಕ್ತಿಯ ರಕ್ತ ಹಾಗೂ ಗಂಟಲಿನ ದ್ರವದ ಮಾದರಿಯನ್ನು ಮೈಸೂರಿಗೆ ರವಾನಿಸಲಾಗಿದೆ. ದುಬೈನಿಂದ ಬಂದ ವ್ಯಕ್ತಿಯನ್ನು ಶಂಕಿತ ಎಂದು ಪರಿಗಣಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶುಕ್ರವಾರ ರಕ್ತ ಮಾದರಿಯ ವರದಿ ನಂತರ ವಾಸ್ತವ ಗೊತ್ತಾಗಲಿದೆ.
Advertisement
ಕೊಡಗು ಮೂಲದ ವ್ಯಕ್ತಿ ದುಬೈನಲ್ಲಿ ಕೆಲಸ ಮಾಡುತ್ತಿದ್ದು, ಮಂಗಳೂರಿಗೆ ಭೇಟಿ ನೀಡಿ ಕೊಡಗಿಗೆ ಬಂದಿದ್ದರು.