ಮಂಡ್ಯ: ವಿಶ್ವವಿಖ್ಯಾತ ಮೇಲುಕೋಟೆ ಕಲ್ಯಾಣಿಯಲ್ಲಿ ಮುಳುಗಿ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಕೂಡ ಕಲ್ಯಾಣಿಯಲ್ಲಿ ಓರ್ವನ ಶವ ಪತ್ತೆಯಾಗಿದೆ.
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿದ್ದು, ಪ್ರತಿ ನಿತ್ಯ ಸಾವಿರಾರು ಜನ ಭಕ್ತರು ಇಲ್ಲಿಗೆ ಬಂದು ಕಲ್ಯಾಣಿಯಲ್ಲಿ ಪುಣ್ಯಸ್ನಾನ ಮಾಡುವುದು, ಕೈ-ಕಾಲು ಮುಖ ತೊಳೆಯುವುದು ಮಾಡುತ್ತಾರೆ.
Advertisement
Advertisement
ಮೇಲುಕೋಟೆಯ ಸಂಸ್ಕೃತಿ ಸಂಶೋಧನಾಲಯದಲ್ಲಿ ನೌಕರನಾಗಿ ಕೆಲಸ ಮಾಡುತ್ತಿದ್ದ ರಮೇಶ್ ಎಂಬ ವ್ಯಕ್ತಿ ಭಾನುವಾರ ಸಂಜೆ ಪಂಚ ಕಲ್ಯಾಣಿಯಲ್ಲಿ ಕೈ-ಕಾಲು ಮುಖ ತೊಳೆಯಲು ಹೋಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಇಂದು ಅವರ ಶವ ಪತ್ತೆಯಾಗಿದೆ.
Advertisement
ಕಲ್ಯಾಣಿಯ ಸುತ್ತ ಕಟ್ಟಿರುವ ಪಾಚಿಯಿಂದ ಕಾಲು ಜಾರಿ ಬಿದ್ದಿರುವ ಶಂಕೆ ವ್ಯಕ್ತವಾಗುತ್ತಿದೆ. ಕಲ್ಯಾಣಿಯಲ್ಲಿ ಮುಳುಗಿ ಮೃತಪಡುತ್ತಿರುವ ಪ್ರಕರಣಗಳು ಪದೇ ಪದೇ ಮರುಕಳಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಕಲ್ಯಾಣಿಯ ಸುತ್ತ ಸುರಕ್ಷಾ ಕ್ರಮ ಕೈಗೊಳ್ಳಬೇಕೆಂದು ಭಕ್ತರು ಆಗ್ರಹಿಸುತ್ತಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv