ಬೆಂಗಳೂರು: ನಗರದ ಹೊರವಲಯ ನೆಲಮಂಗಲ ತಾಲೂಕಿನ ರಾಯರಪಾಳ್ಯದ ಬಳಿ ಕೆಎಸ್‍ಆರ್ ಟಿಸಿ ಬಸ್ ಹಾಗೂ ಖಾಸಗಿ ಶಾಲಾ ವಾಹನ ಹಾಗೂ ಬೈಕ್ ನಡುವೆ ಸರಣಿ ಅಪಘಾತ ನಡೆದಿದ್ದು, ಘಟನೆಯಲ್ಲಿ ಬೈಕ್ ಸವಾರ ಸಾವನ್ನಪ್ಪಿದ್ದಾರೆ.
ಮೃತ ದುರ್ದೈವಿಯನ್ನು ಬೆಂಗಳೂರಿನ ನಂದಿನಿ ಲೇಔಟ್ ನಿವಾಸಿ ಡಿ.ಹನುಮಂತಯ್ಯ ಎನ್ನಲಾಗಿದೆ. ಮದುವೆಯ ಆಮಂತ್ರಣ ಪತ್ರಿಕೆಯನ್ನು ದೇವರಿಗೆ ಪೂಜೆ ಸಲ್ಲಿಸಲು ತೆರಳುತ್ತಿದ್ದ ಸಂದರ್ಭದಲ್ಲಿ ಹನುಮಂತಯ್ಯ ಈ ಅವಘಡಕ್ಕೆ ಬಲಿಯಾಗಿದ್ದಾರೆ.
- Advertisement
ಕೆಎಸ್‍ಆರ್ ಟಿಸಿ ಬಸ್ಸಿನಲ್ಲಿದ್ದ 35 ಮಂದಿ ಪ್ರಯಾಣಿಕರಿದ್ದು, ಹೆದ್ದಾರಿ ಮದ್ಯದ ಕಂದಕಕ್ಕೆ ಬಸ್ ಉರುಳದಂತೆ ಚಾಲಕ ಸಮಯ ಪ್ರಜ್ಞೆ ಮೆರೆದು ಬಸ್ ನಿಯಂತ್ರಣಕ್ಕೆ ತಂದಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರೀ ಅನಾಹುತವೊಂದು ತಪ್ಪಿದೆ.
- Advertisement
ಈ ಸರಣಿ ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸುತ್ತಿದ್ದು, ಟ್ರಾಫಿಕ್ ಜಾಮ್ ತೆರವು ಮಾಡಿದ್ದಾರೆ.