ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ಅಪಘಾತವಾಗಿ ಬಿದ್ದವರನ್ನು ರಕ್ಷಿಸಲು ಹೋಗಿದ್ದ ಲಾರಿ ಚಾಲಕ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ ಘಟನೆ ಬೆಂಗಳೂರಿನ ಕೆಂಗೇರಿಯ ನೈಸ್ ರಸ್ತೆಯಲ್ಲಿ ನಡೆದಿದೆ.
ರಾಘವೇಂದ್ರ(29) ಮೃತ ಚಾಲಕ. ಲಾರಿ ನಿಲ್ಲಿಸಿ ರಸ್ತೆ ಬದಿಯಲ್ಲಿ ಅಪಘಾತವಾಗಿ ಬಿದ್ದಿದ್ದವರನ್ನ ವಿಚಾರಿಸಲು ಹೋದಾಗ ಈ ಘಟನೆ ನಡೆದಿದೆ. ದ್ವಿಚಕ್ರ ವಾಹನದಲ್ಲಿ ಇಬ್ಬರು ಯುವಕರು ಬರುತ್ತಿದ್ದಾಗ ನಿಯಂತ್ರಣ ತಪ್ಪಿ ಚರಂಡಿಯಲ್ಲಿ ಬಿದ್ದರು. ಆಗ ಲಾರಿ ಚಾಲಕ ಯುವಕರನ್ನು ರಕ್ಷಿಸಲು ಹೋಗುವಾಗ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ರಾಘವೇಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸದ್ಯ ಯುವಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ನಸುಕಿನ ಜಾವ 1.30ಕ್ಕೆ ಈ ಅಪಘಾತ ಸಂಭವಿಸಿದೆ. ಇನ್ನೂ ಸ್ಥಳಕ್ಕೆ ಕೆಂಗೇರಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.