Connect with us

ಡ್ರಾಪ್ ಕೊಡುವ ನೆಪದಲ್ಲಿ 6 ವರ್ಷದ ಬಾಲಕಿ ಕಿಡ್ನಾಪ್

ಡ್ರಾಪ್ ಕೊಡುವ ನೆಪದಲ್ಲಿ 6 ವರ್ಷದ ಬಾಲಕಿ ಕಿಡ್ನಾಪ್

ಬಳ್ಳಾರಿ: ಡ್ರಾಪ್ ಕೊಡುವ ನೆಪದಲ್ಲಿ 6 ವರ್ಷದ ಬಾಲಕಿಯನ್ನು ಅಪರಿಚಿತ ವ್ಯಕ್ತಿಯೊಬ್ಬ ಅಪಹರಿಸಿಕೊಂಡು ಹೋಗಿರುವ ಘಟನೆ ಬಳ್ಳಾರಿ ತಾಲೂಕಿನ ಕಪ್ಪಗಲ್ಲು ಗ್ರಾಮದಲ್ಲಿ ನಡೆದಿದೆ.

6 ವರ್ಷದ ಬಾಲಕಿ ಅಪಹರಣವಾದ ಮಗುವಾಗಿದೆ. ಮಗುವನ್ನು ಅಪಹರಿಸಿಕೊಂಡು ಹೋಗುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಿರವಾರ ಗ್ರಾಮದಿಂದ ಕಪ್ಪಗಲ್ ಗ್ರಾಮದ ಖಾಸಗಿ ಶಾಲೆಗೆ ಹೋಗಿದ್ದ ಮಗು, ಬುಧವಾರ ಸಂಜೆ ಮನೆಗೆ ಹಿಂದಿರುಗುವಾಗ ಈ ಘಟನೆ ನಡೆದಿದೆ.

ಬೈಕ್‍ನಲ್ಲಿ ಬಂದಿದ್ದ ವ್ಯಕ್ತಿ ಡ್ರಾಪ್ ಮಾಡುವ ನೆಪದಲ್ಲಿ ಮಗುವಿನ ಅಪಹರಣ ಮಾಡಿದ್ದಾನೆ. ನಂತರ ಪೋಷಕರು ಮನೆಗೆ ಮಗು ಬಂದಿಲ್ಲ ಎಂದು ವಿಚಾರಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಕುರಿತು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತಕ್ಷಣ ಪೊಲೀಸರು ಕಾರ್ಯಚರಣೆ ಕೈಗೊಂಡಾಗ ಸಿಸಿಟಿವಿ ದೃಶ್ಯಾವಳಿ ಪತ್ತೆಯಾಗಿದ್ದು, ಎಲ್ಲಾ ಕಡೆ ಸಂದೇಶ ಕಳುಹಿಸಿದ್ದಾರೆ.

ಬುಧವಾರ ರಾತ್ರಿ ಮಗು ಆಂಧ್ರದ ಓಬಳಾಪುರದಲ್ಲಿ ಪತ್ತೆಯಾಗಿದೆ. ಬಳಿಕ ಯಾರೋ ಸ್ವಾಮಿಗೆ ಮಗು ಸಿಕ್ಕಿದ್ದು, ಅವರು ಪೊಲೀಸರಿಗೆ ತಂದು ಒಪ್ಪಿಸಿದ್ದಾರೆ. ಸದ್ಯಕ್ಕೆ ಕಿಡ್ನಾಪ್ ಆದ ಮಗು ಪತ್ತೆಯಾಗಿದ್ದು, ಅತ್ಯಾಚಾರ ಮಾಡಿರುವ ಅನುಮಾನ ಬಂದ ಹಿನ್ನೆಲೆಯಲ್ಲಿ ಮಗುವನ್ನು ವೈದ್ಯಕೀಯ ತಪಾಸಣೆಗೆ ಕಳುಹಿಸಲಾಗಿದೆ. ಆದರೆ ಆರೋಪಿ ಪರಾರಿಯಾಗಿದ್ದು, ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.

Advertisement
Advertisement