ಹಾಸನ: ಅಪರಿಚಿತ ವ್ಯಕ್ತಿಯೊಬ್ಬರ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆಗೈದಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಹೊಳೆನರಸೀಪುರ ತಾಲೂಕು ಹಳೇಕೋಟೆ ಸರ್ಕಲ್‍ನಲ್ಲಿ ಈ ಘಟನೆ ನಡೆದಿದ್ದು, ಕೊಲೆಯ ಬಳಿಕ ದುಷ್ಕರ್ಮಿಗಳು ಸ್ಥಳದಲ್ಲಿ ಮೊಬೈಲ್ ಫೋನ್, ಕೈಯಲ್ಲಿದ್ದ ಉಂಗುರ ಹಾಗೇ ಬಿಟ್ಟು ಹೋಗಿದ್ದಾರೆ. ಮೃತದೇಹದ ಪಕ್ಕದಲ್ಲಿ ಮದ್ಯದ ಬಾಟಲ್ ಹಾಗೂ ಲೋಟ ಪತ್ತೆಯಾಗಿದ್ದು, ಕುಡಿದ ಮತ್ತಿನಲ್ಲಿ ಹತ್ಯೆ ಮಾಡಿರುವುದಾಗಿ ಪೊಲೀಸರು ಶಂಕಿಸಿದ್ದಾರೆ.
Advertisement
ಹೊಳೆನರಸೀಪುರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಹಳೇ ವೈಷಮ್ಯದಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ.