CrimeDistrictsKarnatakaLatestVijayapura

ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯ ಬರ್ಬರ ಕೊಲೆ

Advertisements

ವಿಜಯಪುರ: ಕ್ಷುಲ್ಲಕ ವಿಚಾರಕ್ಕೆ ಕೊಡಲಿಯಿಂದ ಕೊಚ್ಚಿ ವ್ಯಕ್ತಿಯನ್ನು ಕೊಲೆ ಮಾಡಿದ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಗಡಿ ಸೋಮನಾಳ ಗ್ರಾಮದಲ್ಲಿ ನಡೆದಿದೆ.

ಸೋಮನಾಳ ಗ್ರಾಮದ ಗೋಲ್ಲಾಳಪ್ಪ ಸಂಗಣ್ಣ ಹಡಪದ (28) ಕೊಲೆಯಾದ ದುರ್ದೈವಿ. ಶನಿವಾರ ಸಂಜೆ ಅದೇ ಗ್ರಾಮದ ಶಿವಪುತ್ರಪ್ಪ ಮೈಲಾರಪ್ಪ ಮದ್ದರಕಿ ಎಂಬವರ ಜೊತೆ ಕ್ಷುಲ್ಲಕ ವಿಚಾರಕ್ಕೆ ವಾಗ್ವಾದ ನಡೆದಿತ್ತು. ಇದರಿಂದ ಕೋಪಗೊಂಡಿದ್ದ ಶಿವಪುತ್ರಪ್ಪ ಕಂಠಪೂರ್ತಿ ಕುಡಿದು, ಮಧ್ಯರಾತ್ರಿ ಮನೆಯ ಹೊರಗಡೆ ಕಟ್ಟೆಯ ಮೇಲೆ ಮಲಗಿದ್ದ ಗೋಲ್ಲಾಳಪ್ಪನ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ತಾಳಿಕೋಟೆ ಸಬ್ ಇನ್ಸ್ ಪೆಕ್ಟರ್ ಜಿ.ಎಸ್. ಬಿರಾದಾರ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ. ಅಲ್ಲದೇ ಆರೋಪಿ ಶಿವಪುತ್ರಪ್ಪನು ಈ ಹಿಂದೆಯೂ ತನ್ನ ಹೆಂಡತಿಯನ್ನು ಕೊಲೆಮಾಡಿ, ಶಿಕ್ಷೆ ಅನುಭವಿಸಿ ಬಿಡುಗಡೆಯಾಗಿದ್ದನೆಂದು ತಿಳಿಸಿದ್ದಾರೆ. ಪರಾರಿಯಾಗಿರುವ ಶಿವಪುತ್ರಪ್ಪನಿಗಾಗಿ ವ್ಯಾಪಕ ಶೋಧ ನಡೆದಿದ್ದು, ಘಟನೆ ಸಂಬಂಧ ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Leave a Reply

Your email address will not be published.

Back to top button