CrimeDistrictsKarnatakaLatestLeading NewsMain Post

ಗಂಡ-ಹೆಂಡತಿ ಜಗಳ ಬಿಡಿಸಲು ಮಧ್ಯ ಬಂದವನೇ ಕೊಲೆ

ವಿಜಯಪುರ: ಗಂಡ ಹೆಂಡತಿಯ ಜಗಳ ಬಿಡಿಸಲು ಮಧ್ಯ ಬಂಧವನೇ ಭೀಕರವಾಗಿ ಕೊಲೆಯಾಗಿರುವ ಘಟನೆ ವಿಜಯಪುರದ ಗುರುಪಾದೇಶ್ವರ ನಗರದಲ್ಲಿ ನಡೆದಿದೆ.

ಪರುಶರಾಮ ಅಬಟೇರಿ (30) ಮೃತಪಟ್ಟಿದ್ದಾನೆ. ಮೂಲತಃ ಬಾಗಲಕೋಟೆ ಜಿಲ್ಲೆಯ ಅಚನೂರ ಗ್ರಾಮದ ನಿವಾಸಿಯಾಗಿರುವ ಪರಶುರಾಮ ವಿಜಯಪುರದ ಖಾಸಗಿ ಕಂಪನಿಯಲ್ಲಿ ಉದ್ಯೋಗಿ ಮಾಡುತ್ತಿದ್ದ. ಗುರುಪಾದೇಶ್ವರ ನಗರದಲ್ಲಿ ಕೆಇಬಿ ನಿವೃತ್ತ ನೌಕರ ಇಜೇರಿ ಎಂಬುವರ ಮನೆಯಲ್ಲಿ ಬಾಡಿಗೆಗೆ ವಾಸವಾಗಿದ್ದ. ಇದನ್ನೂ ಓದಿ: ಒಂದು ಹುಡುಗಿ ನಿಮ್ಮೊಂದಿಗೆ ಸೆಕ್ಸ್ ಮಾಡಬೇಕು ಅಂದ್ರೆ..? – ಶಕ್ತಿಮಾನ್ ಖ್ಯಾತಿಯ ಮುಖೇಶ್ ವಿವಾದಾತ್ಮಕ ಹೇಳಿಕೆ

ಇಂದು ಸಂಜೆ 4:30ರ ವೇಳೆಗೆ ಮನೆಯ ಮಾಲೀಕನ ಮಗ ಮತ್ತು ಆತನ ಹೆಂಡತಿ ಜಗವಾಡುತ್ತಿದ್ದರು. ಜಗಳ ಬಿಡಿಸಲು ಪರುಶರಾಮ ಹೋಗಿದ್ದಾನೆ. ಈ ಸಂದರ್ಭದಲ್ಲಿ ಜಗಳ ವಿಕೋಪ ಹೋಗಿ ಹೆಂಡತಿಯ ಸಂಬಂಧಿಕರು ಪರಶುರಾಮನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಜಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Live Tv

Leave a Reply

Your email address will not be published.

Back to top button