ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಅಜೀಂ ಪ್ರೇಮ್‍ಜಿ ಅವರಿಗೆ ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರೆಸ್‍ಕ್ಲಬ್ ವರ್ಷದ ವ್ಯಕ್ತಿಯಾಗಿ ಅಜೀಂ ಪ್ರೇಮ್‍ಜಿ ಹಾಗೂ ಪ್ರೆಸ್ ಕ್ಲಬ್ 2021 ವರ್ಷದ ವ್ಯಕ್ತಿಯಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಿದರು.

ಪ್ರೆಸ್ ಕ್ಲಬ್ ವಿಶೇಷ ಪ್ರಶಸ್ತಿಯನ್ನು ಪದ್ಮಶ್ರೀ ಹರೇಕಳ ಹಾಜಬ್ಬ, ನಟ ಕಿಚ್ಚ ಸುದೀಪ್, ಡಾ. ದೇವಿ ಪ್ರಸಾದ್ ಶೆಟ್ಟಿ, ಸಚಿವ ಡಾ.ಕೆ.ಸುಧಾಕರ್‍ಗೆ ನೀಡಲಾಯಿತು. ಇದೇ ವೇಳೆ, ಎಸ್‍ಎಸ್‍ಎಲ್‍ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಇದನ್ನೂ ಓದಿ: ಭಾರತ ಹಿಂದೂ ರಾಷ್ಟ್ರವಲ್ಲ, ಮುಸ್ಲಿಂ ರಿಪಬ್ಲಿಕ್ ಕೂಡಾ ಅಲ್ಲ ಜಾತ್ಯಾತೀತ ರಾಷ್ಟ್ರ – ಹಿಜಬ್ ಬಿಡಲು ಸಾಧ್ಯವಿಲ್ಲ
ಪ್ರೆಸ್ ಕ್ಲಬ್ ಬೆಂಗಳೂರು ವತಿಯಿಂದ ಹಮ್ಮಿಕೊಳ್ಳಲಾದ 2020-21ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು.
ಶಿಕ್ಷಣ ಸಹಿತ ಹಲವು ವಿಷಯಗಳ ಕುರಿತು ಬೆಳಕಾಗಿ ಸಮಾಜಕ್ಕೆ ಪೂರಕ ಕೆಲಸ ಮಾಡುತ್ತಿರುವ ಪತ್ರಕರ್ತರ ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡಲು ನಮ್ಮ ಸರ್ಕಾರ ಬದ್ಧ.@KarnatakaVarthe@Ramesh_aravindpic.twitter.com/6fAKsA297r
— Dr. Ashwathnarayan C. N. (@drashwathcn) February 24, 2022
ಪಬ್ಲಿಕ್ ಟಿವಿ ಮುಖ್ಯಸ್ಥರಾದ ಹೆಚ್‍ಆರ್ ರಂಗನಾಥ್, ಸಚಿವ ಅಶ್ವಥನಾರಾಯಣ್, ನಟ ರಮೇಶ್ ಅರವಿಂದ್ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಿದರು. ಇದನ್ನೂ ಓದಿ: ಮೆಟ್ರೋ ಸುರಂಗದಲ್ಲಿ ಅವಿತಿದ್ದಾರೆ ಕನ್ನಡಿಗರು!












