ಮಂಗಳೂರು: ಮಂಗಳಮುಖಿಯರಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಗರದ ಹೊರವಲಯದ ಸುರತ್ಕಲ್ ಎನ್.ಐ.ಟಿ.ಕೆ ಟೋಲ್ ಗೇಟ್ ಬಳಿ ನಿನ್ನೆ ಮಧ್ಯರಾತ್ರಿ ನಡೆದಿದೆ.
ಟೋಲ್ ಗೇಟ್ ತೆರವಿಗೆ ಪ್ರತಿಭಟಿಸುತ್ತಿರುವ ಆಸಿಫ್ ಎಂಬವರ ಮೇಲೆ ಹಲ್ಲೆಗೆ ಯತ್ನ. ವ್ಯಕ್ತಿಗೆ ಮಂಗಳಮುಖಿಯರು ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ ಹಾಗೂ ಪ್ರಾಣ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಅವರು ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಮಾರ್ಚ್‌ನಲ್ಲಿ ಬೆಲ್ ಬಾಟಮ್ 2 ಪಕ್ಕಾ
ದೂರು ದಾಖಲಿಸಿಕೊಂಡ ಪೊಲೀಸರು ವಾಸವಿ ಗೌಡ, ಲಿಪಿಕಾ, ಹಿಮಾ, ಆದ್ಯ, ಮಾಯಾ, ಮೈತ್ರಿ ಎಂಬ 6 ಮಂದಿ ಮಂಗಳಮುಖಿಯರನ್ನು ವಶಕ್ಕೆ ಪಡೆದಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ದುರ್ವರ್ತನೆ ತೋರಿದ ಆರೋಪದ ಮೇಲೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 504(ಬೆದರಿಕೆ), 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಏರ್ ಇಂಡಿಯಾ ವಿಶ್ವದಲ್ಲೇ ಅತ್ಯುತ್ತಮವಾಗಿಸುವುದು ನಮ್ಮ ಗುರಿ: ಎನ್ ಚಂದ್ರಶೇಖರನ್
ಆಸಿಫ್ ಅಕ್ರಮವಾಗಿ ಟೋಲ್ ನಡೆಸುತ್ತಿರುವುದಾಗಿ ಆರೋಪಿಸಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದರು.