Connect with us

ಆಟವಾಡುತ್ತಿದ್ದ 11ರ ಬಾಲಕಿಯನ್ನ ಹೊತ್ತೊಯ್ದು ಅತ್ಯಾಚಾರವೆಸಗಿದ ಕಾಮುಕ

ಆಟವಾಡುತ್ತಿದ್ದ 11ರ ಬಾಲಕಿಯನ್ನ ಹೊತ್ತೊಯ್ದು ಅತ್ಯಾಚಾರವೆಸಗಿದ ಕಾಮುಕ

ವಿಜಯಪುರ: 11 ವರ್ಷದ ಬಾಲಕಿಯನ್ನ ಹೊತ್ತೊಯ್ದು ಕಾಮುಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ವಿಜಯಪುರ ತಾಲೂಕಿನ ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆರೋಪಿ 42 ವರ್ಷದ ಅಶೋಕ ಭಾವಿಕಟ್ಟಿ ಈ ಪೈಶಾಚಿಕ ಕೃತ್ಯ ಎಸಗಿದ್ದಾನೆ. ಶುಕ್ರವಾರ ಬಾಲಕಿ ಮನೆ ಮುಂದೆ ಆಡವಾಡುತ್ತಿದ್ದಳು. ಈ ವೇಳೆ ಆರೋಪಿ ಅಶೋಕ ಭಾವಿಕಟ್ಟಿ ಬಾಲಕಿಯನ್ನು ಹೊತ್ತೊಯ್ದಿದ್ದು, ಗ್ರಾಮದ ಹೊರಗೆ ಜಮೀನಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿ ಪರಾರಿಯಾಗಿದ್ದಾನೆ.

ಬಳಿಕ ಬಾಲಕಿ ಬಂದು ಪೋಷಕರಿಗೆ ವಿಷಯ ತಿಳಿಸಿದ್ದು, ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಘಟನೆ ಸಂಬಂಧ ಬಬಲೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಬಬಲೇಶ್ವರ ಕ್ಷೇತ್ರದ ಬಿಜೆಪಿ ಮುಖಂಡರ ಜೊತೆ ಗುರುತಿಸಿಕೊಂಡಿದ್ದ ಎನ್ನಲಾಗುತ್ತಿದೆ. ಪ್ರಕರಣವನ್ನು ಮುಚ್ಚಿಹಾಕಲು ಬಿಜೆಪಿ ಮುಖಂಡರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಪೋಷಕರು ಆರೋಪಿಸುತ್ತಿದ್ದಾರೆ.

Advertisement
Advertisement