ಸ್ನೇಹಿತನಿಂದಲೇ ಪರ್ಸನಲ್ ಫೋಟೋ ಲೀಕ್ – ವಿದ್ಯಾರ್ಥಿನಿ ಆತ್ಮಹತ್ಯೆ

Public TV
1 Min Read
telangana police

ಹೈದರಾಬಾದ್: ತೆಲಂಗಾಣದಲ್ಲಿ (Telangana) ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು (Student) ರ‍್ಯಾಂಗಿಂಗ್‌ಗೆ ಒಳಗಾಗಿ ಮನನೊಂದು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಬೆನ್ನಲ್ಲೇ ಇನ್ನೊಬ್ಬ ವಿದ್ಯಾರ್ಥಿನಿ ತನ್ನ ವೈಯಕ್ತಿಕ ಫೋಟೋಗಳು (Private Photo) ಲೀಕ್ ಆಗಿರುವ ಹಿನ್ನೆಲೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮೂಲಗಳ ಪ್ರಕಾರ ವಾರಂಗಲ್‌ನಲ್ಲಿ ಎಂಜಿನಿಯರ್ ವಿದ್ಯಾರ್ಥಿನಿ ತನ್ನ ಸ್ನೇಹಿತನಿಂದಲೇ ಖಾಸಗಿ ಫೋಟೋಗಳು ಲೀಕ್ ಆಗಿರುವುದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಿದ್ಯಾರ್ಥಿನಿಗೆ ಯುವಕನೊಂದಿಗೆ ಕೇವಲ ಸ್ನೇಹ ಮಾತ್ರವೇ ಇದ್ದು, ಆತ ಮಾತ್ರ ಆಕೆಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ.

Police Jeep

ವಿದ್ಯಾರ್ಥಿನಿ ಕೆಲ ದಿನಗಳ ಹಿಂದೆ ಮತ್ತೊಬ್ಬ ಎಂಜಿನಿಯರ್ ವಿದ್ಯಾರ್ಥಿಯನ್ನು ಪರಿಚಯ ಮಾಡಿಕೊಂಡಿದ್ದಳು. ಇದರಿಂದ ಕೆರಳಿದ್ದ ಆಕೆಯ ಸ್ನೇಹಿತ ವಿದ್ಯಾರ್ಥಿನಿಯ ಖಾಸಗಿ ಫೋಟೋಗಳನ್ನು ತನ್ನ ಇತರ ಸ್ನೇಹಿತರೊಂದಿಗೆ ಹಂಚಿಕೊಂಡಿದ್ದಾನೆ. ಇದರಿಂದ ಮನನೊಂದ ವಿದ್ಯಾರ್ಥಿನಿ ಭಾನುವಾರ ಸಂಜೆ ತನ್ನ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ರ‍್ಯಾಗಿಂಗ್‍ನಿಂದ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

crime 1

ಘಟನೆಯ ಬಳಿಕ ವಿದ್ಯಾರ್ಥಿನಿಯು ಇಬ್ಬರು ಯುವಕರಿಂದ ಕಿರುಕುಳ ಅನುಭವಿಸುತ್ತಿದ್ದಳು. ಇದರಿಂದ ಆಕೆ ಆತ್ಮಹತ್ಯೆಯ ನಿರ್ಧಾರ ಮಾಡಿಕೊಂಡಿದ್ದಾಳೆ ಎಂದು ಆಕೆಯ ಪೋಷಕರು ತಿಳಿಸಿದ್ದಾರೆ. ಇದೀಗ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳು ಪೊಲೀಸರ ವಶದಲ್ಲಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: UP ಉಮೇಶ್ ಪಾಲ್ ಕೊಲೆ ಕೇಸ್ – ಎನ್‍ಕೌಂಟರ್‌ಗೆ ಆರೋಪಿ ಬಲಿ

Share This Article