ಬೆಂಗಳೂರು: ಬೆಲೆ ಏರಿಕೆ ವಿರೋಧಿಸಿ ಮಹದೇವಪುರ ಕ್ಷೇತ್ರದಲ್ಲಿ ಆಮ್ ಆದ್ಮಿ ಪಾರ್ಟಿಯ ನೂರಾರು ಕಾರ್ಯಕರ್ತರು ಆಟೋ ರ್ಯಾಲಿ ನಡೆಸುವ ಮೂಲಕ ಪ್ರತಿಭಟನೆ ನಡೆಸಿದರು.
Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಕ್ಷೇತ್ರದ ಅಧ್ಯಕ್ಷ ಅಶೋಕ್ ಮೃತ್ಯುಂಜಯ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ ಶೇ.60ಕ್ಕೂ ಹೆಚ್ಚು ಪೆಟ್ರೋಲ್, ಡೀಸೆಲ್ ಹಾಗೂ ತೈಲ ಬೆಲೆಗಳ ಮೇಲೆ ಅಬಕಾರಿ ಸುಂಕ, ವ್ಯಾಟ್ ಸುಂಕ ಹಾಗೂ ಇನ್ನಿತರ ಸೆಸ್‍ಗಳನ್ನು ವಿಧಿಸುವುದರ ಮೂಲಕ ದೇಶದ ಎಲ್ಲಾ ಪ್ರಜೆಗಳ ಜೇಬಿಗೆ ಕನ್ನ ಹಾಕುವ ಕೆಲಸಗಳನ್ನು ಮಾಡುತ್ತಿರುವುದು ಖಂಡನೀಯ ಎಂದರು. ಇದನ್ನೂ ಓದಿ:ಆನೇಕಲ್ ರೇವ್ ಪಾರ್ಟಿ ಪ್ರಕರಣ- 35 ಜನರ ಬಂಧನ
Advertisement
Advertisement
ಕೇಂದ್ರ ಸರ್ಕಾರವು ಅಂತರರಾಷ್ಟ್ರೀಯ ಮಾರುಕಟ್ಟೆ ವಿನಿಮಯ ದರ, ಅವಾಸ್ತವಿಕ ವಿಚಾರಗಳನ್ನು ಹೇಳುವುದರ ಮೂಲಕ ರಾಜ್ಯ ಹಾಗೂ ದೇಶದ ಪ್ರಜೆಗಳ ದಿಕ್ಕನ್ನು ತಪ್ಪಿಸಿ ಬೆಲೆ ಏರಿಸಿದೆ. ಜನತೆಯ ಹಣವನ್ನು ಕೊಳ್ಳೆ ಹೊಡೆಯುತ್ತಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ:ಮತ್ತೆ ಒಂದಾಗಲಿರುವ ರಾಜಕುಮಾರ ಜೋಡಿ – ಸೆಟ್ಟೇರಲಿದೆ ಪುನೀತ್, ಸಂತೋಷ್ ಕಾಂಬಿನೇಷನ್‍ನ ಹೊಸ ಸಿನಿಮಾ
Advertisement
ಇತ್ತೀಚೆಗೆ ವಿಧಾನ ಸಭೆಯಲ್ಲೂ ಬೆಲೆ ಏರಿಕೆಗಳ ಬಗ್ಗೆ ಚರ್ಚೆ ನಡೆದರೂ, ಕರ್ನಾಟಕ ರಾಜ್ಯ ಬಿಜೆಪಿ ಸರ್ಕಾರ ಇದುವರೆಗೂ ಯಾವುದೇ ತೆರಿಗೆಯನ್ನು ಇಳಿಸಿಲ್ಲ. ಈ ಕೂಡಲೇ ರಾಜ್ಯ ಸರ್ಕಾರ ಬೆಲೆ ಏರಿಕೆಯನ್ನು ಇಳಿಸದಿದ್ದರೆ ಆಮ್ ಆದ್ಮಿ ಪಾರ್ಟಿ ಕರ್ನಾಟಕ ರಾಜ್ಯದಾ ಪ್ರತಿಭಟನೆಯನ್ನು ಹಮ್ಮಿಕೊಳ್ಳುತ್ತದೆ ಎಂದು ಎಚ್ಚರಿಸಿದರು.