ನವದೆಹಲಿ: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ದ್ವಿಪೌರತ್ವ (Dual Citizenship) ಅಂಶವನ್ನು ಪರಿಶೀಲನೆ ಮಾಡುತ್ತಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.
ರಾಹುಲ್ ಬ್ರಿಟನ್ ಪ್ರಜೆಯಾಗಿರುವ ಕಾರಣ ಅವರ ಭಾರತದ ಪೌರತ್ವ ರದ್ದು ಮಾಡಬೇಕೆಂದು ಕೋರಿ ಕರ್ನಾಟಕದ (Karnataka) ಶಿಶಿರ್ ವಿಘ್ನೇಷ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಬಗ್ಗೆ ಪ್ರತಿಕ್ರಿಸಲು ಕೇಂದ್ರ ಗೃಹ ಸಚಿವಾಲಯಕ್ಕೆ ಅಲಹಾಬಾದ್ ಹೈಕೋರ್ಟ್ ಸೂಚಿಸಿತ್ತು.
Advertisement
ಕಾಂಗ್ರೆಸ್‌ನ (Congress) ರಾಹುಲ್ ಗಾಂಧಿ ಅವರ ದ್ವಿಪೌರತ್ವದ ವಿಷಯವನ್ನು ಪರಿಶೀಲಿಸಲಾಗುತ್ತಿದೆ ಎಂದು ಸರ್ಕಾರವು ಹೈಕೋರ್ಟ್‌ಗೆ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆಯಾಗಿ ತಿಳಿಸಿದೆ.
Advertisement
Advertisement
ಕೇಂದ್ರ ಗೃಹ ಸಚಿವಾಲಯವು, ಅರ್ಜಿದಾರರು ಮಾಡಿದ ಪ್ರಾತಿನಿಧ್ಯವನ್ನು ಸಚಿವಾಲಯದಲ್ಲಿ ಸ್ವೀಕರಿಸಲಾಗಿದೆ. ಡಿಸೆಂಬರ್ 19 ರಂದು ಈ ವಿಚಾರವನ್ನು ಪಟ್ಟಿ ಮಾಡಿ. ಪರಿಶೀಲನೆಯ ವಿವರಗಳನ್ನು ಅಂದು ತಿಳಿಸಲಾಗುವುದು ಎಂದು ಹೇಳಿದೆ. ಇದನ್ನೂ ಓದಿ: ನೀವು ಗೆದ್ದಾಗ ಮಾತ್ರ ಇವಿಎಂ ತಿರುಚಿರಲ್ವಾ? – ಬ್ಯಾಲೆಟ್ ಪೇಪರ್ ಮತದಾನ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ
Advertisement
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ವಿಘ್ನೇಶ್ ಅವರು, ಸರ್ಕಾರವು ತಕ್ಷಣವೇ ರಾಹುಲ್ ಗಾಂಧಿಯವರ ಭಾರತೀಯ ಪೌರತ್ವವನ್ನು ಹಿಂತೆಗೆದುಕೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ. ರಾಹುಲ್ ಅವರ ಹೆಸರು ಪೌರತ್ವ ದಾಖಲೆಗಳಲ್ಲಿದೆ ಎನ್ನುವುದನ್ನು ನಾವು ಯುಕೆ ಸರ್ಕಾರದ ಜೊತೆ ಸಂವಹನ ಮಾಡಿ ದಾಖಲೆಗಳನ್ನು ಸ್ವೀಕರಿಸಿದ್ದೇವೆ ಎಂದು ಹೇಳಿದರು.
ನಾವು ಎಲ್ಲಾ ದಾಖಲೆಗಳನ್ನು ಅಲಹಾಬಾದ್ ಹೈಕೋರ್ಟ್‌ಗೆ (Allahabad High Court) ಸಲ್ಲಿಸಿದ್ದೇವೆ. ಭಾರತೀಯ ಕಾನೂನುಗಳ ಅಡಿಯಲ್ಲಿ ದ್ವಿಪೌರತ್ವವನ್ನು ಅನುಮತಿಸಲಾಗುವುದಿಲ್ಲ. ಯಾರಾದರೂ ಮತ್ತೊಂದು ರಾಷ್ಟ್ರದ ಪೌರತ್ವವನ್ನು ತೆಗೆದುಕೊಂಡ ನಂತರ ಭಾರತೀಯ ಪೌರತ್ವವು ಸ್ವಯಂಚಾಲಿತವಾಗಿ ರದ್ದಾಗುತ್ತದೆ ಎಂದರು.
ರಾಹುಲ್ ಪೌರತ್ವಕ್ಕೆ ಸಂಬಂಧಿಸಿದಂತೆ ಇದೇ ರೀತಿಯ ಮನವಿಯನ್ನು ದೆಹಲಿ ಹೈಕೋರ್ಟ್‌ನಲ್ಲಿ ಮತ್ತು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ (Subramanian Swamy) ಅವರು ಸಲ್ಲಿಸಿದ್ದಾರೆ. ಅಲಹಾಬಾದ್ ಹೈಕೋರ್ಟ್‌ನಲ್ಲಿ ಅರ್ಜಿಯ ಸ್ಥಿತಿಯನ್ನು ಖಚಿತಪಡಿಸಿದ ನಂತರವೇ ಈ ವಿಷಯವನ್ನು ಆಲಿಸುವುದಾಗಿ ದೆಹಲಿ ಹೈಕೋರ್ಟ್ ಸೂಚಿಸಿದೆ.