ಕೋಲಾರ: ಇಲ್ಲಿನ ಮಾಲೂರು ವಿಧಾನಸಭಾ ಕ್ಷೇತ್ರದ (Malur Assembly Constituency) ಮರು ಎಣಿಕೆ ಅರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ ಮುಂದಿನ ವಿಚಾರಣೆ ನಡೆಸಲು ಕರ್ನಾಟಕ ಹೈಕೋರ್ಟ್ (Karnataka HighCourt) ಅಗತ್ಯ ದಾಖಲಾತಿ ನೀಡುವಂತೆ ಕೇಳಿದೆ.
2023ರ ವಿಧಾನಸಭಾ ಚುನಾವಣೆಯಲ್ಲಿ (Assembly Election)) ಕಾಂಗ್ರೆಸ್ ಅಭ್ಯರ್ಥಿ ಕೆ.ವೈ ನಂಜೇಗೌಡ ಅವರು 248 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಇದನ್ನ ಪ್ರಶ್ನಿಸಿ ಮತ ಮರು ಎಣಿಕೆಗೆ ಕೋರಿ ಬಿಜೆಪಿ ಅಭ್ಯರ್ಥಿ ಕೆ.ಎಸ್ ಮಂಜುನಾಥಗೌಡ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಅಗತ್ಯ ದಾಖಲಾತಿ ನೀಡುವಂತೆ ಕೇಳಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ (ಆ.13) ಜಿಲ್ಲಾಧಿಕಾರಿಗಳು ದಾಖಲಾತಿಗಾಗಿ ಇವಿಎಂ ಸ್ಟ್ರಾಂಗ್ ರೂಂ ತೆರೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಟಿಬಿ ಡ್ಯಾಂ ನೀರು ಉಳಿಸಲು ಹರಸಾಹಸ – ಇಂದೇ ತಾತ್ಕಾಲಿಕ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ
ಜಿಲ್ಲಾಧಿಕಾರಿಗಳು ಎಲ್ಲಾ ಪಕ್ಷಗಳ ಅಭ್ಯರ್ಥಿಗಳ ಸಮ್ಮುಖದಲ್ಲಿ ಮಂಗಳವಾರ ಇವಿಎಂ ಸ್ಟ್ರಾಂಗ್ ರೂಂ ತೆರೆಯಲಿದ್ದಾರೆ. ಈ ಸಂರ್ಭದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಅಕ್ರಂ ಪಾಷಾ, ಚುನಾವಣೆಯಲ್ಲಿ ಗೆದ್ದ ಹಾಗೂ ಸೋತ ಅಭ್ಯರ್ಥಿಗಳು ಇರಲಿದ್ದಾರೆ. ಸ್ಟ್ರಾಂಗ್ ರೂಮ್ ತೆರೆದ ಬಳಿಕ ಏಜೆಂಟರ್ ಜೆರಾಕ್ಸ್ ಪ್ರತಿ ಸೇರಿದಂತೆ ಮರು ಮತ ಎಣಿಕೆಗೆ ಅಗತ್ಯವಿರುವ ಎಲ್ಲಾ ದಾಖಲಾತಿಗಳನ್ನು ತೆಗೆಯಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯೋತ್ಸವಕ್ಕೆ ಮೋದಿಯಿಂದ ಆಹ್ವಾನ!