ಬೆಂಗಳೂರು: ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಯಾವ ಆಧಾರದಲ್ಲಿ ತೀರ್ಪು ಕೊಟ್ಟಿದೆ ಎಂಬುದು ಗೊತ್ತಿಲ್ಲ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಮೌಲಾನ ಶಫಿ ಸಅದಿ ತಿಳಿಸಿದ್ದಾರೆ.
Advertisement
ಸಂವಿಧಾನಬದ್ಧವಾಗಿ ಕಾನೂನು ಹೋರಾಟ ಮಾಡಲಾಗುವುದು. ಹೆಣ್ಣು ಹಿಜಬ್ ಧರಿಸುವ ಬಗ್ಗೆ ಕುರಾನ್‌ನಲ್ಲಿ ಸ್ಪಷ್ಟ ಉಲ್ಲೇಖವಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಉಲೆಮಾ ಒಕ್ಕೂಟದಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹಿಜಬ್ ಇಸ್ಲಾಂ ಧರ್ಮದ ಅಗತ್ಯದ ಆಚರಣೆ ಅಲ್ಲ: ಹೈಕೋರ್ಟ್ ಐತಿಹಾಸಿಕ ತೀರ್ಪು
Advertisement
ನಮ್ಮ ಹೆಣ್ಣುಮಕ್ಕಳಿಗೆ ಶಿಕ್ಷಣ ಮುಖ್ಯವಾಗಿದೆ. ಷರಿಯತ್ ಬದ್ಧವಾಗಿ ಅವರಿಗೆ ಶಿಕ್ಷಣ ಸಿಗಬೇಕಿದೆ. ಹೀಗಾಗಿ ಈ ಬಗ್ಗೆ ಚರ್ಚಿಸಿ ಮುಂದಿನ ಕ್ರಮಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
Advertisement
Advertisement
ಹಿಜಬ್ ವಿವಾದ ಬಗ್ಗೆ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ. ಹಿಜಬ್ ಇಸ್ಲಾಂ ಧರ್ಮದ ಅಗತ್ಯ ಆಚರಣೆ ಅಲ್ಲ. ಸರ್ಕಾರದ ಸಮವಸ್ತ್ರ ನಿಯಮವನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು. ತರಗತಿಗಳಿಗೆ ಹಿಜಬ್ ಧರಿಸಿ ಹೋಗುವಂತಿಲ್ಲ ಎಂದು ಕೋರ್ಟ್ ತೀರ್ಪಿನಲ್ಲಿ ತಿಳಿಸಿದೆ. ಇದನ್ನೂ ಓದಿ: ಮಕ್ಕಳಿಗೆ ವಿದ್ಯೆಗಿಂತ ಮತ್ತೊಂದಿಲ್ಲ, ನ್ಯಾಯಾಲಯ ಕೊಟ್ಟಿರುವ ತೀರ್ಪನ್ನು ಪಾಲಿಸಬೇಕು: ಬೊಮ್ಮಾಯಿ