ನವದೆಹಲಿ: ಹಿಂದೂ ಹಾಗೂ ಸಿಖ್ ದೇವರುಗಳು ಮತ್ತು ಆರಾಧನಾ ಸ್ಥಳಗಳ ಹೆಸರಿನಲ್ಲಿ ಭಾರತೀಯ ಜನತಾ ಪಕ್ಷಕ್ಕೆ (BJP) ಮತ ಯಾಚಿಸಿದ ಆರೋಪದ ಮೇಲೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಆರು ವರ್ಷಗಳ ಕಾಲ ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ (Delhi High Court) ಸೋಮವಾರ ವಜಾಗೊಳಿಸಿದೆ.
ವಕೀಲ ಆನಂದ್ ಎಸ್ ಜೊಂಧಳೆ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಸಚಿನ್ ದತ್ತಾ ನೇತೃತ್ವದ ಪೀಠ ಅರ್ಜಿದಾರರು ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಊಹಿಸಿರುವುದರಿಂದ ಅರ್ಜಿಯನ್ನು ಸಂಪೂರ್ಣವಾಗಿ ತಪ್ಪಾಗಿ ಗ್ರಹಿಸಲಾಗಿದೆ ಎಂದು ಗಮನಿಸಿ ಯಾವುದೇ ದೂರಿನ ಬಗ್ಗೆ ನಿರ್ದಿಷ್ಟ ಕ್ರಮ ತೆಗೆದುಕೊಳ್ಳುವಂತೆ ಆಯೋಗಕ್ಕೆ ಸೂಚಿಸಲು ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: ನೂರಾರು ಮಹಿಳೆಯರನ್ನು ಪ್ರಜ್ವಲ್ ಜೀವಂತ ಕೊಲೆ ಮಾಡಿದ್ದಾರೆ: ಲಕ್ಷ್ಮಿ ಹೆಬ್ಬಾಳ್ಕರ್
Advertisement
Advertisement
ಆಯೋಗವು ಜೊಂಧಲೆ ಅವರ ದೂರನ್ನು ಕಾನೂನಿನ ಪ್ರಕಾರ ಪರಿಶೀಲಿಸುತ್ತದೆ ಎಂದು ಕೇಂದ್ರ ಚುನಾವಣಾ ಆಯೋಗದ ಪರವಾಗಿ ವಕೀಲ ಸಿದ್ಧಾಂತ್ ಕುಮಾರ್ ಹೇಳಿದರು. ಆಯೋಗವು ನಿತ್ಯವು ಇಂತಹ ದೂರುಗಳನ್ನು ಸ್ವೀಕರಿಸುತ್ತದೆ, ಪರಿಶೀಲಿಸುತ್ತದೆ ಮತ್ತು ಕ್ರಮ ತೆಗೆದುಕೊಳ್ಳುತ್ತದೆ. ಆಯೋಗವು ಒಂದು ಸಾಂವಿಧಾನಿಕ ಸಂಸ್ಥೆ ಎಂದು ವಾದಿಸಿದರು. ಇದನ್ನೂ ಓದಿ: ಜೆಡಿಎಸ್‍ನಿಂದ ಪ್ರಜ್ವಲ್ ರೇವಣ್ಣ ಅಮಾನತು
Advertisement
ಪ್ರಧಾನಮಂತ್ರಿಯವರು ಹಿಂದೂ ಮತ್ತು ಸಿಖ್ ದೇವತೆಗಳು ಮತ್ತು ಅವರ ಆರಾಧನಾ ಸ್ಥಳಗಳ ಹೆಸರಿನಲ್ಲಿ ಮತಗಳನ್ನು ಕೇಳಿದ್ದು ಮಾತ್ರವಲ್ಲದೆ, ವಿರೋಧಿ ರಾಜಕೀಯ ಪಕ್ಷಗಳು ಮುಸ್ಲಿಮರಿಗೆ ಒಲವು ತೋರುತ್ತಿದ್ದಾರೆ ಎಂದು ಭಾಷಣದಲ್ಲಿ ಹೇಳಿದ್ದಾರೆ. ರಾಮ ಮಂದಿರ ನಿರ್ಮಾಣ, ಕರ್ತಾರ್‌ಪುರ ಸಾಹಿಬ್ ಕಾರಿಡಾರ್ ಅಭಿವೃದ್ಧಿ ಹಾಗೂ ಅಫ್ಘಾನಿಸ್ತಾನದಿಂದ ಗುರು ಗ್ರಂಥ ಸಾಹಿಬ್‌ನ ಪ್ರತಿಗಳನ್ನು ವಾಪಸ್ ತಂದಿರುವುದಾಗಿ ಪ್ರಧಾನಿ ಮೋದಿ ಹೇಳಿದ್ದಾರೆ. ಇದನ್ನೂ ಓದಿ: ಗೌಡರ ಮನೆಗೆ ಕಪ್ಪು ಚುಕ್ಕಿ ತರಲು ದೂರು: ಸಂತ್ರಸ್ತೆಯ ವಿರುದ್ಧವೇ ಕುಟುಂಬಸ್ಥರಿಂದ ಆರೋಪ
Advertisement
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲು ಮತ್ತು ಪ್ರಜಾಪ್ರತಿನಿಧಿ ಕಾಯ್ದೆ 1951ರ ಅಡಿಯಲ್ಲಿ ಆರು ವರ್ಷಗಳ ಕಾಲ ಚುನಾವಣೆಯಿಂದ ಅನರ್ಹಗೊಳಿಸುವಂತೆ ಚುನಾವಣೆ ಆಯೋಗಕ್ಕೆ ನಿರ್ದೇಶನ ನೀಡಲು ಮನವಿ ಮಾಡಲಾಗಿತ್ತು. ಇದನ್ನೂ ಓದಿ: ಬೇರೆ ರಾಜ್ಯಕ್ಕೆ ಹೋಲಿಸಿದರೆ ಕರ್ನಾಟಕ ಅತ್ಯಂತ ಸುರಕ್ಷಿತವಾಗಿದೆ: ಮೋದಿ ಆರೋಪಕ್ಕೆ ಡಿಕೆಶಿ ತಿರುಗೇಟು