ನವದೆಹಲಿ: ಪೆಟ್ರೋಲ್, ಡೀಸೆಲ್ ದರವು ಕಳೆದ 13 ದಿನ ಏರಿಕೆಯಾಗಿದ್ದು, ಭಾನುವಾರವೂ ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್‍ಗೆ 80 ಪೈಸೆ ಏರಿಕೆಯಾಗಿದೆ. ಒಟ್ಟಾರೆಯಾಗಿ 13ನೇ ದಿನದಲ್ಲಿ ಲೀಟರ್‌ಗೆ 8ರೂ. ಏರಿಕೆಯಾಗಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 107.32 ರೂ. ಇದ್ದ ಪೆಟ್ರೋಲ್ ದರ 108.99 ರೂಪಾಯಿಗೆ ಏರಿಕೆಯಾಗಿದೆ. ಪ್ರತಿ ಲೀಟರ್‌ಗೆ 91.29 ರೂ. ಇದ್ದ ಡೀಸೆಲ್ ದರ ರೂ. 92.83ಕ್ಕೆ ಏರಿಕೆಯಾಗಿದೆ.
ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ ರೂ. 103.41 ರೂಪಾಯಿಗೆ ಏರಿಕೆಯಾಗಿದೆ. ಡೀಸೆಲ್ ಬೆಲೆ ರೂ.94.67 ದಾಖಲಾಗಿದೆ. ಮುಂಬೈನಲ್ಲಿ ಲೀ. ಪೆಟ್ರೋಲ್ ದರ ರೂ. 118.41, ಡೀಸೆಲ್ ರೂ.102.64 ದಾಖಲಾಗಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 108.21 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 99.04 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್‌ಗೆ ಪೆಟ್ರೋಲ್ ಬೆಲೆ 113.03ರೂ ಹಾಗೂ ಡೀಸೆಲ್‍ಗೆ 97.02ರೂ. ದಾಖಲಾಗಿದೆ. ಇದನ್ನೂ ಓದಿ: ಗ್ರಾಮ ಪಂಚಾಯ್ತಿ ಸದಸ್ಯೆ ನೇತೃತ್ವದಲ್ಲೇ ಬಾಲ್ಯ ವಿವಾಹ – ಪ್ರಕರಣ ತಡವಾಗಿ ಬೆಳಕಿಗೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇದನ್ನೂ ಓದಿ: ಹರ್ಷನ ಕೊಲೆ ವೈಯಕ್ತಿಕ ಕಾರಣಗಳಿಂದಲ್ಲ: ಸಿಟಿ ರವಿ