ರಾಂಚಿ: ಜಾರ್ಖಂಡ್ (Jharkhand) ರಾಜಧಾನಿ ರಾಂಚಿಯ (Ranchi) ನಿವಾರಣಪುರ ಪ್ರದೇಶದಲ್ಲಿರುವ ಆರ್‌ಎಸ್‌ಎಸ್ ಕಚೇರಿ ಮೇಲೆ ಮಂಗಳವಾರ ತಡರಾತ್ರಿ ಪೆಟ್ರೋಲ್ ಬಾಂಬ್ (Petrol Bomb) ಎಸೆಯಲು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಬಿಜೆಪಿ ಹಿರಿಯ ನಾಯಕರು ಗಂಭೀರ ಆತಂಕ ವ್ಯಕ್ತಪಡಿಸಿದ್ದು, ಇದು ದೊಡ್ಡ ಸಂಚಿನ ಭಾಗವಾಗಿರಬಹುದೆಂದು ಶಂಕೆ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸಚಿವ ಹಾಗೂ ಜಾರ್ಖಂಡ್‌ನ ಬಿಜೆಪಿ ಹಿರಿಯ ನಾಯಕ ಸಂಜಯ್ ಸೇಠ್ ಅವರ ಪ್ರಕಾರ, ಮಂಗಳವಾರ ತಡರಾತ್ರಿ 12:36ರ ಸುಮಾರಿಗೆ ಇಬ್ಬರು ಯುವಕರು ಸಂಘದ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಈ ಘಟನೆ ದೊಡ್ಡ ಸಂಚು ಸೂಚಿಸುತ್ತಿದ್ದು, ಸಂಘದ ಕಚೇರಿ ಸಮೀಪ ಶಾಶ್ವತ ಪೊಲೀಸ್ ಪಿಕೆಟ್ ಸ್ಥಾಪಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಿಎಂ ಆದ್ಮೇಲಾದ್ರೂ ಬ್ಲೂಫಿಲ್ಮ್ ಮಾಡ್ಸೋದು, ಪೋಸ್ಟರ್ ಅಂಟಿಸೋದು ಬಿಡ್ತಾರೆ ಅಂದುಕೊಂಡಿದ್ದೆ: ಹೆಚ್‌ಡಿಕೆ ಕಿಡಿ
ಘಟನೆ ಕುರಿತು ಪ್ರತಿಕ್ರಿಯಿಸಿದ ನಗರ ಉಪ ಪೊಲೀಸ್ ಅಧೀಕ್ಷಕ ಕೆ.ವಿ. ರಮಣ್, ಸ್ಥಳದಿಂದ ಎರಡು ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಪರಿಶೀಲಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಸೈಬರ್ ಡಿಎಸ್‌ಪಿ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳನ್ನು ತನಿಖೆಗೆ ನಿಯೋಜಿಸಲಾಗಿದ್ದು, ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ ಎಂದರು. ಇದನ್ನೂ ಓದಿ: ಕೋಲಾರ | ಪ್ರೀತಿಸಿ ಮದುವೆಯಾದ ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ
ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆಯ ವೇಳೆ ಕೆಲ ಶಂಕಿತರ ಕುರಿತು ಮಾಹಿತಿ ಲಭ್ಯವಾಗಿದ್ದು, ಅವರ ಪತ್ತೆಗಾಗಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಲಾಗಿದೆ. ಇದನ್ನೂ ಓದಿ: ಚಾ.ನಗರ| ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ
ಇದೇ ವೇಳೆ ಜಾರ್ಖಂಡ್ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಬಾಬುಲಾಲ್ ಮರಾಂಡಿ, ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಚೇರಿ ಮೇಲೆ ಬಾಂಬ್ ಎಸೆದಿರುವ ಸಾಧ್ಯತೆ ಇದೆ ಎಂದು ಆರೋಪಿಸಿದ್ದಾರೆ. ಇದು ಇನ್ನೂ ದೊಡ್ಡ ಘಟನೆಯೊಂದಕ್ಕೆ ಮುನ್ನುಡಿಯಾಗಿರಬಹುದೆಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: PublicTV Explainer: ಸೊಳ್ಳೆ ಗಾತ್ರದ ಡ್ರೋನ್ ಸೃಷ್ಟಿಸಿದ ಚೀನಾ – ಮಿಲಿಟರಿ ಕಣ್ಗಾವಲಿನಲ್ಲಿ ಹೊಸ ಮೈಲಿಗಲ್ಲು
ಸದ್ಯ ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದು, ದಾಳಿಯ ಹಿಂದಿನ ಉದ್ದೇಶ ಹಾಗೂ ಆರೋಪಿಗಳ ಗುರುತು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ. ಇದನ್ನೂ ಓದಿ: We’re Most Famous Couple – ಜಿ7 ಶೃಂಗದಲ್ಲಿ ಪ್ರಧಾನಿ ಮೋದಿಗೆ ಮೆಲೋನಿ ಹಾಸ್ಯ
