ಚಾಮರಾಜನಗರ: ಆಕಸ್ಮಿಕ ಬೆಂಕಿ ತಗುಲಿ ಪೆಟ್ರೋಲ್ ಬಂಕ್ ಬ್ಲಾಸ್ಟ್ ಆಗಿರುವ ಘಟನೆ ಗಡಿ ಜಿಲ್ಲೆಯಲ್ಲಿ ನಡೆದಿದೆ.
ಭುವನೇಶ್ವರಿ ವೃತ್ತದಲ್ಲಿರುವ ಹೆಚ್‍ಪಿ ಪೆಟ್ರೋಲ್ ಬಂಕ್‍ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಇಡೀ ಪೆಟ್ರೋಲ್ ಬಂಕ್ ಸ್ಫೋಟವಾಗಿ ಸುಟ್ಟು ಕರಕಲಾಗಿದೆ. ಮಧ್ಯಾಹ್ನ ಸುಮಾರು 1.30ಕ್ಕೆ ವೇಳೆ ಪೆಟ್ರೋಲ್ ಹಾಕುವ ವೇಳೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿ ಕಾಣಿಸಿಕೊಂಡ ತಕ್ಷಣ ಬಂಕ್‍ನ ಸಿಬ್ಬಂದಿ ಹಾಗೂ ಗ್ರಾಹಕರು ಪೆಟ್ರೋಲ್ ಬಂಕ್‍ನಿಂದ ಆಚೆ ಓಡಿ ಬಂದಿದ್ದಾರೆ. ನಂತರ ಪೆಟ್ರೋಲ್ ಬಂಕ್ ಬ್ಲಾಸ್ಟ್ ಆಗಿದೆ. ಈ ವಿಷಯ ತಿಳಿದ ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ವೇಳೆ ಪೆಟ್ರೋಲ್ ಹಾಕಿಸಿಕೊಳ್ಳಲು ಬಂದಿದ್ದ ಪೊಲೀಸ್ ಪೇದೆ ವಸಂತ್ ಕುಮಾರ್ ಮತ್ತು ಪತ್ನಿಗೆ ಸಣ್ಣ ಪುಟ್ಟಗಾಯಗಳಾಗಿದ್ದು, ಅವರನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇದಲ್ಲದೇ ಎರಡು ಬೈಕ್‍ಗಳು ಬೆಂಕಿಯ ಕಿನ್ನಾಲೆಗೆ ಸಿಲುಕಿ ಸುಟ್ಟು ಕರಕಲಾಗಿವೆ. ಸದ್ಯಕ್ಕೆ ಬೆಂಕಿ ಹೇಗೆ ಕಾಣಿಸಿಕೊಂಡಿದೆ ಎಂದು ಕಾರಣ ತಿಳಿದು ಬಂದಿಲ್ಲ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv