ಬೆಂಗಳೂರು: ಪೆಟ್ರೋಲ್, ಡಿಸೇಲ್ ಮೇಲಿನ ಸೆಸ್ ಕಡಿಮೆ ಮಾಡಿ ಎಂದು ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಡಾ ಸುಧಾಕರ್ ಸಿಎಂ ಕುಮಾರಸ್ವಾಮಿ ಅವರಿಗೆ ಟ್ವೀಟ್ ಮಾಡಿ ಮನವಿ ಮಾಡಿಕೊಂಡಿದ್ದಾರೆ.
ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರನ್ನು ದಯವಿಟ್ಟು ಅನುಸರಿಸಿ. ನಾಯ್ಡು ಅವರು ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಸೆಸ್ ತೆರಿಗೆಯನ್ನು 3-4% ಕಡಿತಗೊಳಿಸಿದ್ದಾರೆ. ಕರ್ನಾಟಕದಲ್ಲಿ ಪೆಟ್ರೋಲ್, ಡಿಸೇಲ್ ದರ ಭಾರತದ ಇತರ ರಾಜ್ಯಗಳಿಗಿಂತ ಅಧಿಕವಾಗಿದೆ. ಇದರಿಂದಾಗಿ ಬಡಜನರು, ರೈತರು ಹಾಗೂ ಮಹಿಳೆಯರ ಮೇಲೆ ಪರಿಣಾಮ ಬೀರುತ್ತದೆ ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ. ಇದನ್ನು ಓದಿ: ನೂರರ ಗಡಿಯತ್ತ ತೈಲ ಬೆಲೆ: ಪೆಟ್ರೋಲ್‍ನಲ್ಲಿ ಕೇಂದ್ರ, ರಾಜ್ಯ ಸರ್ಕಾರದ ಪಾಲು ಎಷ್ಟು? ಕೇಂದ್ರ ಹೇಳೋದು ಏನು?
Advertisement
ತೈಲ ಬೆಲೆ ಏರಿಕೆ ವಿರೋಧಿಸಿ ಬಂದ್ ನಡೆಸುತ್ತಿರುವಂತೆಯೇ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ರಾಜಸ್ಥಾನ ಸರ್ಕಾರ 4%ರಷ್ಟು ಇಳಿಕೆ ಮಾಡಿತ್ತು. ಅದರ ಬೆನ್ನಲ್ಲೇ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಪ್ರತಿ ಲೀಟರ್‍ಗೆ 2 ರೂ ಕಡಿಮೆ ಮಾಡಿದ್ದರು. ಇದನ್ನು ಓದಿ: ಭಾರತದಲ್ಲಿ ಪೆಟ್ರೋಲ್ ದರ 82 ರೂ. – ಪಾಕಿಸ್ತಾನ, ಅಮೆರಿಕ, ಶ್ರೀಲಂಕಾದಲ್ಲಿ ಎಷ್ಟು?
Advertisement
Hon chief minister please follow AP cm mr Naidu in reducing the cess tax on petrol & diesel by at least 3-4% per litre. The living cost in Karnataka is one of the highest in s India. It is affecting poor, farmer & women. pic.twitter.com/2d4DcYWtvJ
— Dr Sudhakar K (@mla_sudhakar) September 11, 2018
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv