ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಎರಡನೇ ತ್ರೈಮಾಸಿಕದಲ್ಲಿ 2,748.66 ಕೋಟಿ ರೂ. ನಷ್ಟವನ್ನು ಅನುಭವಿಸಿದೆ.
ರಷ್ಯಾ- ಉಕ್ರೇನ್ ಯುದ್ಧದಿಂದ(Russia- Ukraine War) ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದರೂ ತೈಲ ಬೆಲೆಯನ್ನು ಪರಿಷ್ಕರಣೆ ಮಾಡದ ಕಾರಣ ಇಂಡಿಯನ್ ಆಯಿಲ್ ಕಾರ್ಪೊರೇಷನ್(IOC), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್(BPCL), ಹಿಂದೂಸ್ತಾನ್ ಪೆಟ್ರೋಲಿಯಂ(HPCL) ಜುಲೈ -ಸೆಪ್ಟೆಂಬರ್ ಅವಧಿಯಲ್ಲಿ ಭಾರೀ ನಷ್ಟವನ್ನು ಅನುಭವಿಸಿದೆ.
Advertisement
Advertisement
ಈ ಹಣಕಾಸು ವರ್ಷದ ಮೊದಲಾರ್ಧದಲ್ಲಿ ತೈಲ ಕಂಪನಿಗಳು ಒಟ್ಟು 21,201.2 ಕೋಟಿ ರೂ. ನಷ್ಟವನ್ನು ಅನುಭವಿಸಿವೆ. ತೈಲ ಕಂಪನಿಗಳು ಇಷ್ಟೊಂದು ಪ್ರಮಾಣದ ನಷ್ಟ ಅನುಭವಿಸಿರುವುದು ಇದೇ ಮೊದಲು. ಇದನ್ನೂ ಓದಿ: ಬರೋಬ್ಬರಿ 11,000 ಉದ್ಯೋಗಿಗಳನ್ನು ವಜಾಗೊಳಿಸಿದ ಮೆಟಾ
Advertisement
ಏರಿಕೆ ಆಗುತ್ತಿರುವ ಹಣದುಬ್ಬರ ನಿಯಂತ್ರಿಸಲು ಕೇಂದ್ರ ಸರ್ಕಾರ ಮೇ 21 ರಂದು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ ಅನುಕ್ರಮವಾಗಿ 8 ರೂ. ಮತ್ತು 6 ರೂ. ಇಳಿಕೆ ಮಾಡಿತ್ತು. ಇದರಿಂದಾಗಿ ಪ್ರತಿ ಲೀಟರ್ ಪೆಟ್ರೋಲ್ ದರ 9.5 ರೂ., ಡೀಸೆಲ್ ದರ 7 ರೂ. ಇಳಿಕೆಯಾಗಿತ್ತು.
Advertisement
ಎರಡು ವರ್ಷಗಳ ಕಾಲ ಎಲ್‌ಪಿಜಿ ಅಡುಗೆ ಅನಿಲವನ್ನು ಕಡಿಮೆ ಬೆಲೆಗೆ ನೀಡಿ ಆಗಿದ್ದ ನಷ್ಟವನ್ನು ಸರಿದೂಗಿಸಲು ತೈಲ ಕಂಪನಿಗಳಿಗೆ ಕೆಲ ದಿನಗಳ ಹಿಂದೆ ಕೇಂದ್ರ ಸರ್ಕಾರ 22,000 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿತ್ತು.