ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ರಾಜ್ಯ ಸರ್ಕಾರ ಕಾರಣ ಅಲ್ಲ ಎಂದು ಹೇಳುವ ಮೂಲಕ ಸಿಎಂ ಕುಮಾರಸ್ವಾಮಿ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಕೃಷ್ಣದಲ್ಲಿ ಮಾತನಾಡಿದ ಅವರು, ಸಿಎಂ ರಾಜ್ಯದ ಸೆಸ್ ಇಳಿಸಲಿ ಎನ್ನುವ ಬಿಜೆಪಿ ನಾಯಕರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿ ಬೆಲೆ ಏರಿಕೆಗೆ ರಾಜ್ಯ ಸರ್ಕಾರ ಕಾರಣ ಅಲ್ಲ. ಕೇಂದ್ರ ಸರ್ಕಾರದ ಕೆಲ ಆರ್ಥಿಕ ನೀತಿಗಳೇ ಬೆಲೆ ಏರಿಕೆಗೆ ಕಾರಣ ಅಂತ ಕಿಡಿಕಾರಿದರು.
Advertisement
ಪೆಟ್ರೋಲ್ ದರ ಕಡಿಮೆ ಮಾಡುವ ಬಗ್ಗೆ ಬಿಜೆಪಿ ನಾಯಕರು ನಮಗೆ ಸಲಹೆ ನೀಡುವುದು ನಿಲ್ಲಿಸಲಿ. ಪ್ರಧಾನಿ ಮೋದಿಗೆ ಸಲಹೆ ನೀಡಿದರೆ ಒಳ್ಳೆಯದು ಎಂದು ಬಿಜೆಪಿ ನಾಯಕರಿಗೆ ಟಾಂಗ್ ನೀಡಿದರು. ಇದನ್ನು ಓದಿ: ನೂರರ ಗಡಿಯತ್ತ ತೈಲ ಬೆಲೆ: ಪೆಟ್ರೋಲ್‍ನಲ್ಲಿ ಕೇಂದ್ರ, ರಾಜ್ಯ ಸರ್ಕಾರದ ಪಾಲು ಎಷ್ಟು? ಕೇಂದ್ರ ಹೇಳೋದು ಏನು?
Advertisement
Advertisement
ಹುಬ್ಬಳ್ಳಿ ಮನೆಯನ್ನು ಖಾಲಿ ಮಾಡಿದ ವಿಚಾರಕ್ಕೆ ಸ್ಪಷ್ಟನೆ ಕೊಟ್ಟ ಸಿಎಂ, ಮನೆ ಮಾಲೀಕರಿಗೆ ಆರ್ಥಿಕ ಸಮಸ್ಯೆ ಇದೆಯಂತೆ. ಹೀಗಾಗಿ ನಾನು ಆ ಮನೆಯನ್ನು ಖಾಲಿ ಮಾಡಿದ್ದೇನೆ. ಮುಂದೆ ಹುಬ್ಬಳ್ಳಿಯಲ್ಲಿ ಮನೆ ಮಾಡುವ ಕುರಿತು ನಿರ್ಧಾರ ಮಾಡುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಎಲೆಕ್ಷನ್ ವೇಳೆ ಹುಬ್ಬಳ್ಳಿಯಲ್ಲಿ ಮನೆ- ಇದೀಗ ಇದ್ದಕ್ಕಿದ್ದಂತೆ ಖಾಲಿ ಮಾಡಿದ ಸಿಎಂ
Advertisement
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಉತ್ತರ ಕರ್ನಾಟಕ ದೇವಸ್ಥಾನಗಳಿಗೆ ಭೇಟಿ ನೀಡಲಿ ಎನ್ನುವ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಶೆಟ್ಟರ್ ಆಸೆಯನ್ನು ಈಡೇರಿಸುತ್ತೇನೆ. ಆದಷ್ಟು ಬೇಗ ಅ ಭಾಗದ ದೇವಸ್ಥಾನಕ್ಕೂ ಭೇಟಿ ನೀಡುತ್ತೇನೆ ಎಂದು ಟಾಂಗ್ ನೀಡಿದರು.
ಪರಿಹಾರ ಬಂದಿಲ್ಲ: ಕೊಡಗು ನೆರೆ ಪರಿಹಾರ ಕುರಿತು ಕೇಂದ್ರ ಸರ್ಕಾರ ಯಾವುದೇ ಪರಿಹಾರ ಇನ್ನು ನೀಡಿಲ್ಲ. ನಾನು ಮತ್ತು ಸಚಿವ ದೇಶಪಾಂಡೆ ಅವರು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪರಿಹಾರದ ಬಗ್ಗೆ ಮನವಿ ಸಲ್ಲಿಸಿದ್ದೇವೆ. ಆದರೆ ಈವರೆಗೂ ಕೇಂದ್ರ ಸರ್ಕಾರದಿಂದ ಲಿಖಿತ ಉತ್ತರ ಬಂದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಭಾರತದಲ್ಲಿ ಪೆಟ್ರೋಲ್ ದರ 82 ರೂ. – ಪಾಕಿಸ್ತಾನ, ಅಮೆರಿಕ, ಶ್ರೀಲಂಕಾದಲ್ಲಿ ಎಷ್ಟು?