ನವದೆಹಲಿ: ಪೆಟ್ರೋಲ್, ಡೀಸೆಲ್ ಪ್ರತಿ ಲೀಟರ್‌ಗೆ 80 ಪೈಸೆ ಹೆಚ್ಚಳವಾಗಿದೆ. ಸತತ ಎರಡನೇ ದಿನವೂ 80 ಪೈಸೆ ಹೆಚ್ಚಳ ಆಗಿದ್ದು ವಾಹನ ಸವಾರರಿಗೆ ಬೆಲೆ ಏರಿಕೆ ಬಿಸಿ ಮುಟ್ಟಿದೆ.
Advertisement
ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 102.26 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.58 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 111.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.85 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 102.91 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 92.95 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ 106.34 ಮತ್ತು ಡೀಸೆಲ್ 91.42, ಚೆನ್ನೈನಲ್ಲಿ ಪೆಟ್ರೋಲ್ ದರ 102.91, ಡೀಸೆಲ್ ದರ 92.95 ರೂಪಾಯಿಗೆ ಏರಿಕೆಯಾಗಿದೆ.
Advertisement
Advertisement
ನವೆಂಬರ್ 2ರಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿರಲಿಲ್ಲ. ಪಂಚ ರಾಜ್ಯಗಳ ಚುನಾವಣೆ ಬಳಿಕ ದರ ಏರಿಕೆಯ ನಿರೀಕ್ಷೆ ಇತ್ತು. ಕಳೆದ ವರ್ಷ ನವೆಂಬರ್‍ನಿಂದ ಈವರೆಗೂ ಕಚ್ಚಾ ತೈಲ ದರದಲ್ಲಿ ಶೇ. 25ರಷ್ಟು ಏರಿಕೆಯಾಗಿದೆ. ರಷ್ಯಾ, ಉಕ್ರೇನ್ ನಡುವಿನ ಸಂಘರ್ಷದಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಬಾರಿ ಏರಿಕೆ ಕಂಡಿದ್ದು ಈಗ ಭಾರತದ ಮೇಲೂ ಪರಿಣಾಮ ಬಿದ್ದಿದೆ.
Advertisement
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತದೆ.