ಬೆಂಗಳೂರು: ಪೆಟ್ರೋಲ್, ಡೀಸೆಲ್ ದರ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಂತೋಷದಲ್ಲಿರುವ ರಾಜ್ಯದ ಜನತೆಗೆ ಕುಮಾರಸ್ವಾಮಿ ಸರ್ಕಾರ ಶಾಕ್ ನೀಡಿದೆ. ಇಂದಿನಿಂದಲೇ ಪೆಟ್ರೋಲ್ ಮತ್ತು ಡೀಸೆಲ್ ತೆರಿಗೆಯನ್ನು ಹೆಚ್ಚಿಸಲು ಸರ್ಕಾರ ಆದೇಶ ಪ್ರಕಟಿಸಿದೆ.
ಪ್ರತಿ ಲೀಟರ್ ಪೆಟ್ರೋಲ್ ಮೇಲೆ ಶೇ.32 ಮತ್ತು ಡೀಸೆಲ್ ಮೆಲೆ ಶೇ.21 ತೆರಿಗೆ ಹೆಚ್ಚಳಕ್ಕೆ ಸರ್ಕಾರ ಆದೇಶ ಪ್ರಕಟಿಸಿದೆ. ತೆರಿಗೆ ಹೆಚ್ಚಳದಿಂದ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ದರ ಒಂದು ರೂ. ಏರಿಕೆಯಾಗಲಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ತೆರಿಗೆಯನ್ನು ಏರಿಸುತ್ತಿದ್ದೇವೆ ಎಂದು ಸರ್ಕಾರ ಸ್ಪಷ್ಟನೆ ನೀಡಿದೆ.
Advertisement
ತೆರಿಗೆ ಏರಿಸಿದ ಪರಿಣಾಮ ಕರ್ನಾಟಕದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 70.84 ರೂ. ಆಗಿದ್ದರೆ ಡೀಸೆಲ್ ಬೆಲೆ 64.66 ರೂ.ಗೆ ಏರಿಕೆಯಾಗಲಿದೆ.
Advertisement
Advertisement
ಸಮ್ಮಿಶ್ರ ಸರ್ಕಾರ ರಚನೆ ಬಳಿಕ 40 ಸಾವಿರ ಕೋಟಿ ರೂ. ಮೊತ್ತದಷ್ಟು ರೈತರ ಸಾಲ ಮನ್ನಾ ಘೋಷಿಸಿದ್ದ ಎಚ್‍ಡಿಕೆ, ಅದಕ್ಕಾಗಿ ಹಣ ಹೊಂದಿಸಲು ಸೆಸ್ ಹೆಚ್ಚಿಸಿದ್ದರು. ಬಜೆಟ್ ನಲ್ಲಿ ಕುಮಾರಸ್ವಾಮಿ ಪೆಟ್ರೋಲ್ ಮೇಲಿನ ಸುಂಕವನ್ನು ಶೇ.30 ರಿಂದ ಶೇ.32ಕ್ಕೆ ಹೆಚ್ಚಿಸಿದ್ದರೆ ಡೀಸೆಲ್ ಮೇಲಿನ ಸುಂಕವನ್ನು ಶೇ.19 ರಿಂದ ಶೇ.21ಕ್ಕೆ ಏರಿಸಿದ್ದರು.
Advertisement
ಸೆಪ್ಟೆಂಬರ್ ತಿಂಗಳಿನಲ್ಲಿ ತೈಲ ಬೆಲೆ ಏರಿಕೆ ಆಗುತ್ತಿದ್ದಂತೆ ಕೇಂದ್ರ ಸರ್ಕಾರ ಅಬಕಾರಿ ಸುಂಕವನ್ನು ಕಡಿತಗೊಳಿಸಿತ್ತು. ಅಬಕಾರಿ ಸುಂಕವನ್ನು 1.50 ರೂಪಾಯಿ ಕಡಿಮೆ ಮಾಡಿದ್ದರೆ, ತೈಲ ಕಂಪನಿಗಳು 1 ರೂಪಾಯಿ ಕಡಿಮೆ ಮಾಡಿತ್ತು. ಹೀಗಾಗಿ ಒಟ್ಟು 2.50 ರೂ ಕಡಿತವಾಗಿತ್ತು.
ಅಬಕಾರಿ ಸುಂಕವನ್ನು ಕಡಿತಗೊಳಿಸಿದ ಪರಿಣಾಮ ಸರ್ಕಾರಕ್ಕೆ 10,500 ಕೋಟಿ ರೂ. ಹೊರೆಯಾಗುತ್ತದೆ. ಕೇಂದ್ರ ಸರ್ಕಾರ ಕಡಿಮೆ ಮಾಡಿದಂತೆ ರಾಜ್ಯ ಸರ್ಕಾರಗಳು ವ್ಯಾಟ್ ತೆರಿಗೆಯನ್ನು ಕಡಿತಗೊಳಿಸಲಿ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಸಲಹೆ ನೀಡಿದ್ದರು. ಇದರ ಬೆನ್ನಲ್ಲೇ ಕುಮಾರಸ್ವಾಮಿ ಅವರು ರಾಜ್ಯದಲ್ಲೂ ಪ್ರತಿ ಲೀಟರ್, ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಹೆಚ್ಚುವರಿಯಾಗಿ ವಿಧಿಸಿದ್ದ ಸೆಸ್ ಇಳಿಕೆ ಮಾಡಿದ್ದರು.
ಬೆಲೆ ಏರಿಕೆಯ ಬಗ್ಗೆ ನಿಮ್ಮ ಅಭಿಪ್ರಾಯ ಏನು? ಕಮೆಂಟ್ ಮಾಡಿ ತಿಳಿಸಿ..
ಪೆಟ್ರೋಲ್-ಡೀಸೆಲ್ ದರ ಏರಿಕೆಯಿಂದ ದೇಶದ ಜನತೆ ತತ್ತರಿಸಿ ಹೋಗಿದ್ದಾರೆ. ತೈಲ ದರ ಏರಿಕೆಯು ದಿನನಿತ್ಯ ಬಳಸುವ ವಸ್ತುಗಳ ದರವನ್ನೂ ಹೆಚ್ಚಿಸುತ್ತದೆ.
ಇವೆಲ್ಲವನ್ನು ಮನಗಂಡು ಜನರ ಮೇಲಿನ ಆರ್ಥಿಕ ಹೊರೆಯನ್ನು ಇಳಿಸಲು ಕರ್ನಾಟಕದಲ್ಲಿ ತೈಲ ಬೆಲೆಯನ್ನು ನಮ್ಮ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವು ಸುಮಾರು 2 ರೂ.ಗಳಷ್ಟು ಇಳಿಸಲು ನಿರ್ಧರಿಸಿದೆ.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 17, 2018
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv