ನವದೆಹಲಿ: 2014 ರಲ್ಲಿ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಆಧಿಕಾರ ವಹಿಸಿಕೊಂಡ ಬಳಿಕ ಇಂಧನ ಬೆಲೆಯಲ್ಲಿ ಭಾರೀ ಏರಿಕೆ ಆಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ.
ಒಂದೇ ತಿಂಗಳಲ್ಲಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ಬರೋಬ್ಬರಿ 3 ರೂ. ಏರಿಕೆಯಾಗಿದೆ. ಡೀಸೆಲ್ ದರದಲ್ಲಿ ಎರಡು ತಿಂಗಳ ಅಂತರಲ್ಲಿ 5.85 ಪೈಸೆ ಹೆಚ್ಚಳವಾಗಿದೆ. ಡಿಸೆಂಬರ್ 31 ರಂದು ಪೆಟ್ರೋಲ್ ದರ 71.06 ರೂ ಇದ್ದರೆ, ಪ್ರಸ್ತುತ ಒಂದು ತಿಂಗಳ ಬಳಿಕ 74.07 ರೂ. ಗೆ ಹೆಚ್ಚಳವಾಗಿದೆ.
Advertisement
ಡೀಸೆಲ್ ದರ ಡಿಸೆಂಬರ್ ಪ್ರಾರಂಭದಲ್ಲಿ ಲೀಟರ್ ಗೆ 59.23 ಇದ್ದು, ಪ್ರಸ್ತುತ 65.08 ರೂ. ಗೆ ಏರಿಕೆ ಆಗುವುದರೊಂದಿಗೆ ಬರೋಬ್ಬರಿ 5 ರೂ. ಹೆಚ್ಚಳವಾಗಿದೆ. ನಿರಂತರವಾಗಿ ಇಂಧನ ಬೆಲೆಯಲ್ಲಿ ಏರಿಕೆ ಆಗುತ್ತಿರುವ ಪರಿಗೆ ಪೆಟ್ರೋಲ್ ಬಂಕ್ ಮಾಲೀಕರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.
Advertisement
Advertisement
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಗಗನಕ್ಕೆರುತ್ತಿದ್ದು, ಫೆಬ್ರವರಿ ತಿಂಗಳ ಆರಂಭದಲ್ಲೇ ಭಾರೀ ಪ್ರಮಾಣದಲ್ಲಿ ಇಂಧನ ಬೆಲೆ ಏರಿಕೆ ಯಾಗಿದೆ. 2018-19ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಫೆಬ್ರವರಿ 1 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸುವ ಕುರಿತು ನಿರೀಕ್ಷಿಸಲಾಗುತ್ತಿದೆ.
Advertisement
ಈಗಾಗಲೇ ಬಳಕೆದಾರರ ಮೇಲಿನ ಹೊರೆ ತಗ್ಗಿಸುವುದಕ್ಕಾಗಿ ಕೇಂದ್ರ ಇಂಧನ ಸಚಿವಾಲಯ ಕೇಂದ್ರ ಬಜೆಟ್ ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸುವಂತೆ ಹಣಕಾಸು ಇಲಾಖೆಗೆ ಮನವಿ ಮಾಡಿದೆ. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ವ್ಯಾಟ್ ಇಳಿಸಲ್ಲ: ಸಿಎಂ ಸಿದ್ದರಾಮಯ್ಯ
2017ರ ಅಕ್ಟೋಬರ್ 3ರಂದು ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 2 ರೂ. ಕಡಿತಗೊಳಿಸಿತ್ತು. ಬೆಲೆ ಏರಿಕೆಯಂದ ಜನಸಾಮಾನ್ಯರ ಮೇಲೆ ಆಗುತ್ತಿರುವ ಹೊರೆಯನ್ನು ತಪ್ಪಿಸಲು ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಅಬಕಾರಿ ಮತ್ತು ಸೀಮಾ ಸುಂಕ ಮಡಳಿ ತನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿತ್ತು. ಇದನ್ನೂ ಓದಿ: 70 ರೂ. ಪೆಟ್ರೋಲ್ ನಲ್ಲಿ ಯಾರಿಗೆ ಎಷ್ಟು ಪಾಲು? ಬೇರೆ ರಾಷ್ಟ್ರಗಳಲ್ಲಿ ಎಷ್ಟು ದರವಿದೆ?
2014ರಿಂದ 2016ರ ಅವಧಿಯಲ್ಲಿ ಕೇಂದ್ರ ಸರ್ಕಾರ 9 ಬಾರಿ ಅಬಕಾರಿ ಸುಂಕವನ್ನು ಹೆಚ್ಚಿಸಿತ್ತು. ಈ ಅವಧಿಯಲ್ಲಿ ಪೆಟ್ರೋಲ್ ಮೇಲೆ 11.77 ರೂ., ಡೀಸೆಲ್ ಮೇಲೆ 13.47 ರೂ. ನಂತೆ ಅಬಕಾರಿ ಸುಂಕವನ್ನು ಹೆಚ್ಚಿಸಿತ್ತು. ಇದರಿಂದಾಗಿ 2014-15 ರಲ್ಲಿ ಬೊಕ್ಕಸಕ್ಕೆ 99 ಕೋಟಿ ರೂ.ಬಂದಿದ್ದರೆ, 2016-17 ನೇ ಅವಧಿಯಲ್ಲಿ 2.42 ಲಕ್ಷ ಕೋಟಿ ರೂ. ಆದಾಯ ಬಂದಿತ್ತು. ಇದನ್ನೂ ಓದಿ: ಜಿಎಸ್‍ಟಿ ಅಡಿ ಪೆಟ್ರೋಲ್ ಬಂದ್ರೆ ಬೆಂಗ್ಳೂರಿನಲ್ಲಿ ಪ್ರತಿ ಲೀಟರ್‍ಗೆ 40 ರೂ.ಅಷ್ಟೇ!