ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಿದೆ. ಈ ಕುರಿತು ವಾಹನ ಸವಾರರಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಿದ್ದಾರೆ.
ಶ್ರೀ @narendramodi ಅವರ ನೇತೃತ್ವದ ಕೇಂದ್ರ ಸರಕಾರ ಡೀಸಲ್ ಮೇಲೆ 10 ರೂ ಹಾಗೂ ಪೆಟ್ರೋಲ್ 05 ರೂ ಕಡಿಮೆ ಗೊಳಿಸಿದ್ದು ಸ್ವಾಗತಾರ್ಹ ಜನರಿಗೆ ದೀಪಾವಳಿಯ ಉಡಗೊರೆ ಕೊಟ್ಟಿದ್ದಾರೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು,
1/3
— Basavaraj S Bommai (@BSBommai) November 3, 2021
Advertisement
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇತ್ತೀಚೆಗೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಪೆಟ್ರೋಲ್ ಲೀಟರ್ ಗೆ 112.64 ರೂ. ತಲುಪಿತ್ತು. ಡೀಸೆಲ್ ಬೆಲೆ ಕೂಡ ಶತಕ ಬಾರಿಸಿ ಮುನ್ನುಗ್ಗುತ್ತಿತ್ತು. ಆದರೆ ಈಗ ಕೇಂದ್ರ ಸರ್ಕಾರ ದೀಪಾವಳಿ ಉಡುಗೊರೆಯಾಗಿ ಡೀಸೆಲ್ ಬೆಲೆ ಮೇಲೆ 10 ರೂ. ಮತ್ತು ಪೆಟ್ರೋಲ್ ಮೇಲೆ 5 ರೂ. ಅಬಕಾರಿ ಸುಂಕವನ್ನು ಕಡಿಮೆ ಮಾಡಿದೆ. ಈ ನೂತನ ದರ ಇಂದಿನಿಂದಲೇ ಜಾರಿಗೆ ಬಂದಿದೆ. ಇದನ್ನೂ ಓದಿ: ಇಂದಿನಿಂದ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆ
Advertisement
Advertisement
ಈ ಹಿನ್ನೆಲೆ ವಾಹನ ಸವಾರರು ಕೊಂಚ ನಿರಾಳವಾಗಿದ್ದಾರೆ. ಪೆಟ್ರೋಲ್ ಬೆಲೆ ಕಡಿಮೆ ಮಾಡಿರೋದನ್ನ ಸ್ವಾಗತ ಮಾಡ್ತಿರೋ ವಾಹನ ಸವಾರರು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ. ಜೊತೆಗೆ ಕಡಿಮೆ ಆದ್ರೆ ಸರಿ, ಮತ್ತೆ ಜಾಸ್ತಿ ಮಾಡಿದರೆ ಏನು ಮಾಡೋದು ಎನ್ನುವ ಆತಂಕವನ್ನು ಸಹ ಹೊರ ಹಾಕುತ್ತಿದ್ದಾರೆ.
Advertisement
ರಾಜ್ಯ ಸರ್ಕಾರ ಕೂಡಾ ತನ್ನ ವ್ಯಾಟ್‍ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ 7 ರೂ. ಕಡಿಮೆ ಮಾಡಿದ್ದು, ಇಂದು ಸಂಜೆ ಬಳಿಕ ಕಡಿಮೆಯಾಗಿರೋ ದರ ಜಾರಿಗೆ ಬರಲಿದೆ. ಪೆಟ್ರೋಲ್ ಬೆಲೆ ಬೆಂಗಳೂರಿನಲ್ಲಿ 107.64 ಇದ್ರೆ, ಡೀಸೆಲ್ ಬೆಲೆ 92.03 ಆಗಿದೆ. ಸಂಜೆ ವೇಳೆಗೆ ರಾಜ್ಯ ಸರ್ಕಾರದ ವಿನಾಯತಿ ನೀಡಿರೋ ದರ ಜಾರಿಗೆ ಬಂದ್ರೇ ಪೆಟ್ರೋಲ್ ಬೆಲೆ 100 ರೂ. ಡೀಸೆಲ್ 85 ರೂ.ಗೆ ಬರಲಿದೆ. ಇದನ್ನೂ ಓದಿ: ರಾಜ್ಯ ಸರ್ಕಾರದಿಂದ 7 ರೂ. ಗಳಷ್ಟು ಪೆಟ್ರೋಲ್, ಡೀಸೆಲ್ ತೆರಿಗೆ ಇಳಿಕೆ- ನಾಳೆ ಸಂಜೆಯಿಂದ ಜಾರಿಗೆ