ಸತತ 15ನೇ ದಿನ ಏರಿಕೆ – ಪೆಟ್ರೋಲ್, ಡೀಸೆಲ್ 80 ಪೈಸೆ ಏರಿಕೆ

By
1 Min Read

ನವದೆಹಲಿ: ಸತತ 15ನೇ ದಿನವು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ. ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ 80 ಪೈಸೆ ಏರಿಕೆಯಾಗಿದೆ.

ಕಳೆದ ಎರಡು ವಾರಗಳಿಂದ ಏರಿಕೆಯಾಗುತ್ತಿದ್ದು, ಇಲ್ಲಿವರೆಗೂ 10 ರೂ. ಏರಿಕೆಯಾಗಿದೆ. ಈ ಮೂಲಕ ಒಂದು ಲೀ. ಪೆಟ್ರೋಲ್ ಬೆಲೆ ಬೆಂಗಳೂರಿನಲ್ಲಿ 111.07 ರೂ., ಡೀಸೆಲ್ ಬೆಲೆ 94.78 ರೂ.ಗೆ ಏರಿಕೆಯಾಗಿದೆ. ಇದನ್ನೂ ಓದಿ: ಇ-ಹರಾಜು ಮೂಲಕ ಸಾರಿಗೆಯೇತರ ವಾಹನಗಳಿಗೆ ‘ವಿಐಪಿ ಸಂಖ್ಯೆ’: ಹರಿಯಾಣ ಸಿಎಂ

ದೆಹಲಿಯಲ್ಲಿ 1 ಲೀ. ಪೆಟ್ರೋಲ್ 105.41 ರೂ., ಡೀಸೆಲ್ 96.67 ರೂ.ಗೆ ಏರಿದೆ. ಮುಂಬೈನಲ್ಲಿ ಪೆಟ್ರೋಲ್ 120.51 ರೂ., ಡೀಸೆಲ್ 104.77 ರೂ. ಏರಿಕೆಯಾಗಿದೆ. ಸ್ಥಳೀಯ ತೆರಿಗೆಯ ಆಧಾರದ ಮೇಲೆ ರಾಜ್ಯದಿಂದ ರಾಜ್ಯಕ್ಕೆ ಇಂಧನ ತೈಲ ಬೆಲೆ ಬದಲಾಗುತ್ತದೆ.

Share This Article
Exit mobile version