ನವದೆಹಲಿ: ವಾಹನ ಸವಾರರಿಗೆ ಮತ್ತೆ ಶಾಕ್ ಎದುರಾಗಿದೆ. ಎರಡೇ ವಾರದಲ್ಲಿ ನಾಲ್ಕನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ (Petrol-Diesel Price Hike) ಏರಿಕೆ ಮಾಡಲಾಗಿದೆ. ಸೋಮವಾರ (ಮೇ 25) ಪೆಟ್ರೋಲ್ 2.61 ರೂ. ಮತ್ತು ಡೀಸೆಲ್ 2.71 ರೂ. ಏರಿಕೆಯಾಗಿದೆ.
ಪೆಟ್ರೋಲ್ ಬೆಲೆ ಈಗ ಲೀಟರ್‌ಗೆ 110.89 ರೂ. ಹಾಗೂ ಡೀಸೆಲ್ ಬೆಲೆ ಲೀಟರ್‌ಗೆ 98.80 ರೂ. ಆಗಿದೆ. ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಏರಿಕೆಯಾಗಿದೆ. ಈ ಹಿನ್ನೆಲೆ ಮೇ 15ರಿಂದ ಈಚೆಗೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ದರವನ್ನು ಹೆಚ್ಚಿಸಿವೆ. ಇದನ್ನೂ ಓದಿ: ಬೇರೆ ರಾಷ್ಟ್ರಗಳಿಗೆ ಹೋಲಿಸಿದ್ರೆ ಭಾರತದಲ್ಲೇ ಅತ್ಯಂತ ಕಡಿಮೆ ದರ ಏರಿಕೆ – ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳಕ್ಕೆ ಕೇಂದ್ರ ಸಮರ್ಥನೆ

ಇದಕ್ಕೂ ಮುನ್ನ ಎರಡು ದಿನಗಳ ಹಿಂದೆಯಷ್ಟೇ (ಮೇ 23) ಪೆಟ್ರೋಲ್ ದರವನ್ನು 87 ಪೈಸೆ ಮತ್ತು ಡೀಸೆಲ್ 91 ಪೈಸೆ ಏರಿಕೆ ಮಾಡಲಾಗಿತ್ತು. ಇದೀಗ ಮತ್ತೆ ಪೆಟ್ರೋಲ್ 2.61 ರೂ. ಮತ್ತು ಡೀಸೆಲ್ 2.71 ರೂ. ಏರಿಸಿದ್ದು, ವಾಹನ ಸವಾರರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಎರಡೇ ವಾರದಲ್ಲಿ 4ನೇ ಬಾರಿಗೆ ತೈಲ ದರ ಏರಿಕೆ ಮಾಡಲಾಗಿದ್ದು, ವಾಹನ ಸವಾರರು ಆಕ್ರೋಶ ಹೊರಹಾಕಿದ್ದಾರೆ. ಪದೇ ಪದೇ ದರ ಏರಿಸಿದ್ರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.ಇದನ್ನೂ ಓದಿ: ವಾಹನ ಸವಾರರಿಗೆ ಮತ್ತೆ ಶಾಕ್; ಪೆಟ್ರೋಲ್ 87, ಡೀಸೆಲ್ 91 ಪೈಸೆ ಏರಿಕೆ
