ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ (Petrol-Diesel) ಕೊರತೆಯಾಗಿದೆ ಎಂಬ ಸುಳ್ಳು ವದಂತಿಗಳು ಸಾಮಾಜಿಕ ಜಾಲತಾಣಗಳು ಹಾಗೂ ಮಾಧ್ಯಮಗಳಲ್ಲಿ ಹರಿದಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ವದಂತಿಗಳಿಂದ ಸಾರ್ವಜನಿಕರು ಆತಂಕಕ್ಕೊಳಗಾಗಿ ಪೆಟ್ರೋಲ್ ಬಂಕ್‌ಗಳಲ್ಲಿ ಬಾಟಲಿ ಹಾಗೂ ಕ್ಯಾನ್‌ಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಇಂಧನ ಸಂಗ್ರಹಿಸುತ್ತಿರುವುದು ಕಂಡುಬಂದಿದೆ. ಈ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸ್ಪಷ್ಟೀಕರಣ ನೀಡಿದೆ.
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಾಗರಾಜ್ ಬಿ.ಇ. ಈ ಕುರಿತು ಪ್ರಕಟಣೆ ಹೊರಡಿಸಿದ್ದಾರೆ. ಇದನ್ನೂ ಓದಿ: ಯುದ್ಧ ನಿಲ್ಲಿಸಲು ಟ್ರಂಪ್ ಹಾಕಿರೋ 15 ಅಂಶಗಳ ಅಜೆಂಡಾ ಏನು..? – ಸಂಧಾನ ಮಾತುಕತೆಗೆ 1 ತಿಂಗಳ ಕದನ ವಿರಾಮ
ಪ್ರಕಟಣೆಯಲ್ಲಿ ಏನಿದೆ?
ಸಾಕಷ್ಟು ದಾಸ್ತಾನು ಲಭ್ಯ:
ಕೇಂದ್ರ ಸರ್ಕಾರದಿಂದ ಚಿಲ್ಲರೆ ಮಾರಾಟ ಮಳಿಗೆಗಳಿಗೆ ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆ ಸುಗಮವಾಗಿ ನಡೆಯುತ್ತಿದೆ. ಯಾವುದೇ ರೀತಿಯ ಕೊರತೆ ಉಂಟಾಗಿಲ್ಲ. ಇದನ್ನೂ ಓದಿ: ಮತ್ತೆ ಚಿನ್ನದ ದರ ಜಿಗಿತ – ಆಭರಣ ಪ್ರಿಯರಲ್ಲಿ ಕರಗಿದ ಮಂದಹಾಸ
ವದಂತಿಗಳನ್ನು ನಂಬಬೇಡಿ:
ಇಂಧನ ಕೊರತೆಯ ಬಗ್ಗೆ ಹರಡುತ್ತಿರುವ ಸುದ್ದಿಗಳು ಕೇವಲ ವದಂತಿಗಳಾಗಿದ್ದು, ಸಾರ್ವಜನಿಕರು ಅನಗತ್ಯವಾಗಿ ಆತಂಕ ಪಡುವ ಅಗತ್ಯವಿಲ್ಲ. ಇದನ್ನೂ ಓದಿ: ಹೃದಯದಲ್ಲಿ ಬ್ಲಾಕೇಜ್ – ಸಚಿವ ಶಿವರಾಜ್ ತಂಗಡಗಿಗೆ ಯಶಸ್ವಿ ಸ್ಟಂಟ್ ಅಳವಡಿಕೆ
ಸುರಕ್ಷತೆಯ ಎಚ್ಚರಿಕೆ:
ಚಿಲ್ಲರೆ ಮಾರಾಟ ಮಳಿಗೆಗಳು ವಾಹನಗಳ ಇಂಧನ ಟ್ಯಾಂಕ್‌ಗಳಿಗೆ ಮಾತ್ರ ನೇರವಾಗಿ ಇಂಧನವನ್ನು ಪೂರೈಸುತ್ತವೆ. ಯಾವುದೇ ರೀತಿಯ ಕ್ಯಾನ್ ಅಥವಾ ಬಾಟಲಿಯಲ್ಲಿ ಇಂಧನ ಪೂರೈಸಲು ಅವಕಾಶವಿಲ್ಲ. ಪ್ರತ್ಯೇಕ ಕಂಟೈನರ್‌ಗಳಲ್ಲಿ ಇಂಧನ ಸಂಗ್ರಹಿಸುವುದು ಅತ್ಯಂತ ಅಪಾಯಕಾರಿ ಹಾಗೂ ಕಾನೂನುಬಾಹಿರವಾಗಿದ್ದು, ಅನಾಹುತಗಳಿಗೆ ಕಾರಣವಾಗಬಹುದು. ಇದನ್ನೂ ಓದಿ: ಹಾರ್ಮುಜ್ ಜಲಸಂಧಿ ಬಿಕ್ಕಟ್ಟು – ರಷ್ಯಾದಿಂದ ಮತ್ತೆ 6 ಕೋಟಿ ಬ್ಯಾರಲ್ ಕಚ್ಚಾ ತೈಲ ಖರೀದಿಸಿದ ಭಾರತ
ಕಟ್ಟುನಿಟ್ಟಿನ ಸೂಚನೆ:
ಇಂಧನವನ್ನು ಕೇವಲ ವಾಹನಗಳ ಟ್ಯಾಂಕ್‌ಗಳಿಗೆ ಮಾತ್ರ ಭರ್ತಿ ಮಾಡಬೇಕು. ಬಾಟಲಿ ಅಥವಾ ಪ್ರತ್ಯೇಕ ಕಂಟೈನರ್‌ಗಳಲ್ಲಿ ಇಂಧನ ನೀಡದಂತೆ ಪೆಟ್ರೋಲ್ ಬಂಕ್‌ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಸಾರ್ವಜನಿಕರು ಸಹಕರಿಸಿ, ಅಗತ್ಯಕ್ಕಿಂತ ಹೆಚ್ಚಿನ ಇಂಧನವನ್ನು ಸಂಗ್ರಹಿಸಿ ಆತಂಕ ಸೃಷ್ಟಿಸಬಾರದೆಂದು ಈ ಮೂಲಕ ಮನವಿ ಮಾಡಿದ್ದಾರೆ. ಇದನ್ನೂ ಓದಿ: 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಬಿಜೆಪಿ ನಾಯಕನ ಪುತ್ರ ಅರೆಸ್ಟ್
