ಬೆಂಗಳೂರು: ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆಯನ್ನು ಕಡಿತಗೊಳಿಸಿದ್ದು, ಇಂದಿನಿಂದ ರಾಜ್ಯದಲ್ಲಿ ಹೊಸ ದರ ಜಾರಿಯಾಗಲಿದೆ.
Advertisement
ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಡೀಸೆಲ್ ಮತ್ತು ಪೆಟ್ರೋಲ್ ಬೆಲೆಯನ್ನು ಕಡಿತಗೊಳಿಸಿತ್ತು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರವೂ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ತಲಾ ಏಳು ರೂ. ಗಳಷ್ಟು ಕಡಿಮೆ ಮಾಡಿತ್ತು. ಈ ವಿಷಯವನ್ನು ಟ್ವೀಟ್ ಮಾಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಾಳೆ ಸಂಜೆಯಿಂದ ಈ ದರ ಜಾರಿಯಾಗಲಿದೆ ಎಂದು ತಿಳಿಸಿದ್ದರು. ಇದನ್ನೂ ಓದಿ: ರಾಜ್ಯ ಸರ್ಕಾರದಿಂದ 7 ರೂ. ಗಳಷ್ಟು ಪೆಟ್ರೋಲ್, ಡೀಸೆಲ್ ತೆರಿಗೆ ಇಳಿಕೆ- ನಾಳೆ ಸಂಜೆಯಿಂದ ಜಾರಿಗೆ
Advertisement
ಕರ್ನಾಟಕ ರಾಜ್ಯ ಸರಕಾರವು ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ದರಿಸಿದೆ.
ಈ ನಮ್ಮ ನಿರ್ದಾರದಿಂದ ರಾಜ್ಯ ಸರಕಾರಕ್ಕೆ ಅಂದಾಜು 2100 ಕೋಟಿ ರೂಪಾಯಿ ಕೆ.ಎಸ್.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ. ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂ ಹಾಗೂ ಡಿಸೇಲ್ ಅಂದಾಜು 81.50 ರೂ ಆಗುವ ನೀರಿಕ್ಷೆಯಿದೆ.
2/3
— Basavaraj S Bommai (@BSBommai) November 3, 2021
Advertisement
ಕರ್ನಾಟಕ ರಾಜ್ಯ ಸರ್ಕಾರವು ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ಧರಿಸಿದೆ. ಈ ನಮ್ಮ ನಿರ್ಧಾರದಿಂದ ರಾಜ್ಯ ಸರ್ಕಾರಕ್ಕೆ ಅಂದಾಜು 2100 ಕೋಟಿ ರೂಪಾಯಿ ಕೆ.ಎಸ್.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ ಎಂದಿದ್ದರು. ಇದನ್ನೂ ಓದಿ: ದೀಪಾವಳಿಗೆ ಮೋದಿ ಸರ್ಕಾರದಿಂದ ಬಂಪರ್ – ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆ
Advertisement
ಅದರಂತೆ ರಾಜ್ಯ ಸರ್ಕಾರ ಸೂಚಿಸಿರುವಂತೆ ಇಂದಿನಿಂದ ಪೆಟ್ರೋಲ್ ಮತ್ತು ಡಿಸೇಲ್ ಹೊಸ ದರ ಜಾರಿಯಾಗಿದೆ. ಇಂದು ಸಂಜೆಯಿಂದ ಪೆಟ್ರೋಲ್ ಬೆಲೆಯಲ್ಲಿ 7 ರೂ. ಕಡಿತಗೊಳ್ಳಲಿದ್ದು, 100.64 ರೂ. ಆಗಲಿದೆ.