ನವದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ಬೆಲೆ 1.12 ರೂ. ಇಳಿಕೆಯಾಗಿದ್ದರೆ, ಡೀಸೆಲ್ ಬೆಲೆ 1.24 ರೂ. ಇಳಿಕೆಯಾಗಿದೆ.
ಇಲ್ಲಿಯವರೆಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ನೋಡಿಕೊಂಡು ಭಾರತೀಯ ತೈಲ ಕಂಪನಿಗಳು ಪ್ರತಿ 15 ದಿನಗಳಿಗೊಮ್ಮೆ ತೈಲ ದರವನ್ನು ಪರಿಷ್ಕರಿಸುತ್ತಿದ್ದವು. ಆದರೆ ಶುಕ್ರವಾರದಿಂದ ಪ್ರತಿದಿನ ಪೆಟ್ರೋಲ್ ಡೀಸೆಲ್ ದರ ಪರಿಷ್ಕರಣೆಯಾಗಲಿದೆ.
Advertisement
ಬೆಲೆ ಕಡಿಮೆಯಾದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 70.47 ರೂ. ಆಗಿದ್ದರೆ, ಡೀಸೆಲ್ ಬೆಲೆ 58.52 ರೂ. ಆಗಲಿದೆ.
Advertisement
ಮೇ 31ರಂದು ಪ್ರತಿ ಲೀಟರ್ ಪೆಟ್ರೋಲ್ ಬೆಲೆ 1.23 ರೂ. ಏರಿಕೆಯಾಗಿದ್ದರೆ, ಡೀಸೆಲ್ ಬೆಲೆ 89 ಪೈಸೆ ಏರಿಕೆಯಾಗಿತ್ತು.
Advertisement
ಇದನ್ನೂ ಓದಿ: ಗಮನಿಸಿ, ಶುಕ್ರವಾರ ಬಂಕ್‍ಗಳಲ್ಲಿ ಪೆಟ್ರೋಲ್ ಸಿಗೋದು ಡೌಟ್
Advertisement