ಬೆಂಗಳೂರು: ಪ್ರತಿ ದಿನ ಪೆಟ್ರೋಲ್, ಡೀಸೆಲ್ ದರ ಪರಿಷ್ಕರಣೆ ವಿರೋಧಿಸಿ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಲ್ ಇಂಡಿಯಾ ಪೆಟ್ರೋಲ್ ಡೀಲರ್ಸ್ ಅಸೋಸಿಯೇಷನ್(ಎಐಪಿಡಿಎ) ಬುಧವಾರ ಕರೆ ನೀಡಿದ್ದ ಮುಷ್ಕರವನ್ನು ಹಿಂಪಡೆದಿದೆ.
ಸರ್ಕಾರಿ ಸ್ವಾಮ್ಯದ ಮೂರು ತೈಲ ಕಂಪನಿಗಳು ಹಾಗೂ ಕೇಂದ್ರ ಪೆಟ್ರೋಲಿಯಂ ಸಚಿವರು ಬೇಡಿಕೆಗೆ ಸ್ಪಂದಿಸಿದ್ದಾರೆ. ಜುಲೈ ಅಂತ್ಯದೊಳಗೆ ಈ ಸಮಸ್ಯೆಯನ್ನು ಬಗೆ ಹರಿಸುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ನಾವು ಮುಷ್ಕರವನ್ನು ಹಿಂಪಡೆದಿದ್ದೇವೆ ಎಂದು ಎಐಪಿಡಿಎ ತಿಳಿಸಿದೆ.
Advertisement
ವರ್ತಕರ ಸಲಹೆ ಪಡೆಯದೇ ಕಂಪೆನಿಗಳು ಪ್ರತಿನಿತ್ಯ ಪರಿಷ್ಕರಣೆ ಮಾಡುತ್ತಿವೆ. ಪ್ರತಿನಿತ್ಯ ದರ ಪರಿಷ್ಕರಣೆಯಾಗುತ್ತಿರುವುದರಿಂದ ನಮಗೆ ನಷ್ಟವಾಗುತ್ತಿದೆ ಎಂದು ಹೇಳಿ ಎಐಪಿಡಿಎ ಜುಲೈ 12ರಂದು ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿತ್ತು.
Advertisement
ಪ್ರತಿನಿತ್ಯ ದರ ಪರಿಷ್ಕರಣೆಯಾಗುತ್ತಿರುವುದರಿಂದ ನಮಗೆ ನಷ್ಟವಾಗುತ್ತಿದೆ. ವರ್ತಕರ ಸಲಹೆ ಪಡೆಯದೇ ಕಂಪೆನಿಗಳು ಪ್ರತಿನಿತ್ಯ ಪರಿಷ್ಕರಣೆ ಮಾಡುತ್ತಿವೆ. ಜುಲೈ 12ರಂದು ಬೆಳಗ್ಗೆಯಿಂದ ರಾತ್ರಿಯವರೆಗೆ ಪೆಟ್ರೋಲ್, ಡಿಸೇಲ್ ಸಿಗಲ್ಲ. ಅಷ್ಟೇ ಅಲ್ಲದೇ ಆ ದಿನ ತೈಲವನ್ನು ಖರೀದಿಸಲ್ಲ. ದೇಶಾದ್ಯಂತೆ ನಡೆಯುವ ಪ್ರತಿಭಟನೆ ಸಾಥ್ ನೀಡಲು ರಾಜ್ಯಾದ್ಯಂತ ಮೂರುವರೆ ಸಾವಿರ ಪೆಟ್ರೋಲ್ ಬಂಕ್‍ಗಳು ಬಂದ್ ಆಗಲಿದೆ ಎಂದು ಈ ಹಿಂದೆ ವರ್ತಕರ ಸಂಘದ ಉಪಾಧ್ಯಾಕ್ಷ ಅನೀಸ್ ಪಬ್ಲಿಕ್ ಟಿವಿಗೆ ತಿಳಿಸಿದ್ದರು.
Advertisement
ಇದನ್ನೂ ಓದಿ: ಇನ್ನು ಐದು ವರ್ಷದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 30 ರೂ. ಆಗುತ್ತೆ!
Advertisement
ಇದನ್ನೂ ಓದಿ: ದಕ್ಷಿಣ ಭಾರತದಲ್ಲಿ ಕರ್ನಾಟಕದಲ್ಲೇ ಡೀಸೆಲ್ ಬೆಲೆ ಅತಿ ಕಡಿಮೆ