ಬೆಂಗಳೂರು: ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ಅನ್ನು ಜಿಎಸ್ಟಿ ವ್ಯಾಪ್ತಿಗೆ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಅಕ್ಟೋಬರ್ 13 ರಂದು ದೇಶಾದ್ಯಂತ ಪೆಟ್ರೋಲ್ ಬಂಕ್ ಬಂದ್ ನಡೆಸಲಾಗುವುದು ಎಂದು ಪೆಟ್ರೋಲ್ ಡೀಸೆಲ್ ಡೀಲರ್ಸ್ ಆಸೋಸಿಯೇಷನ್ ತಿಳಿಸಿದೆ.
ಸರ್ಕಾರವು ನಿತ್ಯ ದರದ ಪರಿಷ್ಕರಣೆಯನ್ನು ಕೈ ಬಿಡಲು ಹಾಗೂ ಅಪೂರ್ಣ ಚಂದ್ರ ಕಮೀಟಿ ವರದಿ ಜಾರಿಗೆ ಒತ್ತಾಯಿಸಿ, ಅಕ್ಟೋಬರ್ 12 ರ ಮಧ್ಯರಾತ್ರಿಯಿಂದ ಅಕ್ಟೋಬರ್ 13 ರ ದಿನವಿಡಿ ಪೆಟ್ರೋಲ್ ಬಂಕ್ ಬಂದ್ ನಡೆಸಲಾಗುತ್ತದೆ.
Advertisement
ಕೇಂದ್ರ ಸರ್ಕಾರವು ಪೆಟ್ರೋಲ್-ಡೀಸೆಲ್ ಅನ್ನು ಜಿಎಸ್ಟಿ ವ್ಯಾಪ್ತಿಗೆ ತೆಗೆದುಕೊಳ್ಳದಿದ್ದರೆ, ನಾವು ಅಕ್ಟೋಬರ್ 27 ರಿಂದ ನಮ್ಮ ಬೇಡಿಕೆ ಈಡೇರುವವರೆಗೂ ಅನಿರ್ಧಿಷ್ಟಾವಾಧಿ ಬಂದ್ ನಡೆಸುವುದಾಗಿ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಪೆಟ್ರೋಲ್ ಡೀಸೆಲ್ ಡೀಲರ್ಸ್ ಆಸೋಸಿಯೇಷನ್ ರವೀಂದ್ರನಾಥ್ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.