ತಿರುವನಂತಪುರಂ/ಚೆನ್ನೈ: ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವನ್ನು (PFI) ನಿಷೇಧಿಸಿದ ಒಂದು ದಿನದ ಬಳಿಕ ತಮಿಳುನಾಡು (Tamil Nadu) ಹಾಗೂ ಕೇರಳ (Kerala) ಸರ್ಕಾರಗಳೂ ಪಿಎಫ್‌ಐ ಹಾಗೂ ಅದರ ಅಂಗಸಂಸ್ಥೆಗಳನ್ನು ಕಾನೂನು ಬಾಹಿರ ಎಂದು ಘೋಷಿಸಿ ಆದೇಶ ಹೊರಡಿಸಿವೆ.
ಜಾಗತಿಕ ಮಟ್ಟದ ಭಯೋತ್ಪಾದನಾ ಸಂಘಟನೆ ಐಸಿಸ್ ಹಾಗೂ ಇತರ ಉಗ್ರಗಾಮಿ ಸಂಘಟನೆಗಳೊಂದಿಗೆ ನಂಟು ಹೋದಿರುವ ಹಾಗೂ ದೇಶದೊಳಗೆ ಕೋಮು ದ್ವೇಷವನ್ನು ಹರಡಲು ಪಿಎಫ್‌ಐ ಹಾಗೂ ಅದರ ಅಂಗಸಂಸ್ಥೆಗಳು ಪ್ರಯತ್ನಿಸಿವೆ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಆದೇಶದ ಪ್ರತಿಯಲ್ಲಿ ತಿಳಿಸಿದೆ. ಇದನ್ನೂ ಓದಿ: PFI ಬ್ಯಾನ್: ಹಳೇ ಕೇಸ್, ಹೊಸ ಆಟ – ಇದು ಬಿಜೆಪಿ ಗೇಮ್!
Advertisement
Advertisement
ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ಕೇಂದ್ರ ಸರ್ಕಾರ ಬುಧವಾರ ಪಿಎಫ್‌ಐ ಹಾಗೂ ಅದರ ಅಂಗಸಂಸ್ಥೆಗಳನ್ನು 5 ವರ್ಷಗಳ ವರೆಗೆ ನಿಷೆಧಿಸಿದೆ. ಕಾನೂನು ಬಾಹಿರವೆಂದು ಪಿಎಫ್‌ಐ ಸಂಘಟನೆಯೊಂದಿಗೆ, ರಿಹ್ಯಾಬ್ ಇಂಡಿಯಾ ಫೌಂಡೇಶನ್, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ, ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್, ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್, ನ್ಯಾಷನಲ್ ವುಮೆನ್ಸ್ ಫ್ರಂಟ್, ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ರಿಹ್ಯಾಬ್ ಫೌಂಡೇಶನ್ ಕೇರಳವನ್ನು ನಿಷೇಧಿಸಲಾಗಿದೆ. ಇದನ್ನೂ ಓದಿ: PFI ಸಂಘಟನೆಗಳ ಆಸ್ತಿ ಬಗ್ಗೆ ಸರ್ವೆ ಕಾರ್ಯ ಆಗ್ತಿದೆ: ಆರಗ ಜ್ಞಾನೇಂದ್ರ
Advertisement
Advertisement
ರಾಷ್ಟ್ರೀಯ ತನಿಖಾ ಸಂಸ್ಥೆ (NIA) ದೇಶಾದ್ಯಂತ 15 ರಾಜ್ಯಗಳಲ್ಲಿ ಪಿಎಫ್‌ಐ ವಿರುದ್ಧ ತನಿಖೆ ನಡೆಸಿತ್ತು. ಮಂಗಳವಾರ 7 ರಾಜ್ಯಗಳಲ್ಲಿ ನಡೆಸಿದ ದಾಳಿಯಲ್ಲಿ 150ಕ್ಕೂ ಹೆಚ್ಚು ಜನರನ್ನು ವಶಪಡಿಸಿಕೊಳ್ಳಲಾಗಿತ್ತು. ನಾಯಕರು ಹಾಗೂ ಪದಾಧಿಕಾರಿಗಳು ಸೇರಿದಂತೆ 100ಕ್ಕೂ ಹೆಚ್ಚು ಪಿಎಫ್‌ಐ ಸದಸ್ಯರನ್ನು ಬಂಧಿಸಿದ ಬಳಿಕ ಅದನ್ನು ನಿಷೇಧಿಸಲಾಯಿತು.