ಬೆಳಗಾವಿ: ಕಾಂಗ್ರೆಸ್ ಕಾಲದಲ್ಲಿ ಪಿಎಫ್ಐ (PFI) ಜಾಲ ದೇಶಾದ್ಯಂತ ವ್ಯಾಪಕವಾಗಿ ಹಬ್ಬಿತ್ತು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ (Arun Singh) ಬೆಳಗಾವಿಯಲ್ಲಿ (Belagavi) ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಮರ ಓಲೈಕೆಗಾಗಿ ಕಾಂಗ್ರೆಸ್ (Congress) ನಿರಂತರ ಕೆಲಸ ಮಾಡುತ್ತಿದೆ. ಓಲೈಕೆ ರಾಜಕೀಯ ಮಾಡುವುದು ಕಾಂಗ್ರೆಸ್ನ ಗುಣವಾಗಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯಗೆ ಪುಕ್ಕಲುತನ ಕಾಡ್ತಿರೋದ್ರಿಂದ 18 ವರ್ಷ ತುಂಬದ ಮೊಮ್ಮಗ ಜೊತೆ ಪ್ರಚಾರಕ್ಕೆ ಬರ್ತಿದ್ದಾರೆ – ಸಿಂಹ ಕಿಡಿ
- Advertisement 2
- Advertisement 3
ಕಾಂಗ್ರೆಸ್ ಸತತವಾಗಿ ಚುನಾವಣೆಗಳಲ್ಲಿ ಸೋಲುತ್ತ, ನಿರಂತರವಾಗಿ ಮುಳುಗುತ್ತಿರುವ ಪಕ್ಷವಾಗಿದೆ. ಆದರೆ ದೇಶಾದ್ಯಂತ ಬಿಜೆಪಿ ಚುನಾವಣೆ ಗೆಲ್ಲುತ್ತಿದೆ. ಉತ್ತರಾಖಂಡ್ ಹಾಗೂ ಗೋವಾ ಸೇರಿ ಹಲವು ರಾಜ್ಯಗಳಲ್ಲಿ ಬಿಜೆಪಿ ಗೆದ್ದಿದೆ. ಬಿಜೆಪಿಯಲ್ಲಿ ಟಿಕೆಟ್ ಸಿಗದ ಸಾಮಾನ್ಯ ಕಾರ್ಯಕರ್ತರು ಸಹ ಪಕ್ಷಕ್ಕಾಗಿ ಹಗಲು ರಾತ್ರಿ ದುಡಿಯುತ್ತಾರೆ ಎಂದಿದ್ದಾರೆ.
- Advertisement 4
ಲಕ್ಷ್ಮಣ್ ಸವದಿ (Laxman Savadi) ಹಾಗೂ ಜಗದೀಶ್ ಶೆಟ್ಟರ್ (Jagadish Shettar) ಪಕ್ಷ ತೊರೆದ ವಿಚಾರವಾಗಿ ಮಾತನಾಡಿದ ಅವರು, ಹಿರಿಯ ನಾಯಕರಾಗಿ ಪಕ್ಷ ತೊರೆಯುವ ಮುನ್ನ ಯೋಚನೆ ಮಾಡಬೇಕಿತ್ತು. ಭಾರತದ ಪ್ರಜಾಪ್ರಭುತ್ವವನ್ನು ತೆಗಳುವ ರಾಹುಲ್ ಗಾಂಧಿಯವರ (Rahul Gandhi) ಪಕ್ಷಕ್ಕೆ ಹೋಗಿರುವುದು ದುರಾದೃಷ್ಟಕರ ವಿಷಯ. ದೇಶಾದ್ಯಂತ ಜನರು ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ. ಆದರೆ ಕೆಲವರು ಮುಳುಗುತ್ತಿರುವ ಕಾಂಗ್ರೆಸ್ ಕಡೆ ಪ್ರಯಾಣಿಸುತ್ತಿದ್ದಾರೆ ಎಂದು ಕುಟುಕಿದರು.
ಪಕ್ಷದಲ್ಲಿ ಎಲ್ಲರಿಗೂ ಟಿಕೆಟ್ ನೀಡಲು ಆಗುವುದಿಲ್ಲ. ಟಿಕೆಟ್ ಸಿಗದವರಿಗೆ ನೋವಿದೆ. ಆದರೂ ಬಿಜೆಪಿ ಕಾರ್ಯಕರ್ತರು ಒಂದು ಸಿದ್ಧಾಂತಕ್ಕಾಗಿ ಕೆಲಸ ಮಾಡುತ್ತಾರೆ. ಸಮಾಜಸೇವೆ, ದೇಶ ಸೇವೆ ಅವರಿಗೆ ಮುಖ್ಯವಾಗಿದೆ. ಪ್ರಧಾನಿ ಮೋದಿ (Narendra Modi) ನೇತೃತ್ವದಲ್ಲಿ ಕೆಲಸ ಮಾಡುವುದು ಹೆಮ್ಮೆಯ ವಿಚಾರ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಅವರದ್ದು ಬರೀ ಕುಟುಂಬ ರಾಜಕಾರಣ, ಯಾರು ಪ್ರಶ್ನೆ ಮಾಡಬಾರದು ಅಂದರೆ ಹೇಗೆ: ಎಚ್ಡಿಕೆ ವಿರುದ್ಧ ಸುಮಲತಾ ಕಿಡಿ