ಬೆಂಗಳೂರು: ಪಿಜಿ ಆಯುಷ್-2024 (PG Ayush 2024) ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸೋಮವಾರ ಪ್ರಕಟಿಸಿದೆ.
ಆಕ್ಷೇಪಣೆಗಳನ್ನು ನೋಡಿಕೊಂಡು ಮಂಗಳವಾರ (ನ.12) ಮಧ್ಯಾಹ್ನ 2 ಗಂಟೆಗೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಅಭ್ಯರ್ಥಿಗಳು,ಪೋಷಕರ ಬಳಿ ಚರ್ಚಿಸಿ, ಆಯ್ಕೆಯನ್ನು ದಾಖಲಿಸಬೇಕು. ನಂತರ ಶುಲ್ಕ ಪಾವತಿಸಿ ಕಾಲೇಜಿಗೆ ವರದಿ ಮಾಡಿಕೊಳ್ಳಲು ನ.14ರವರೆಗೆ ಅವಕಾಶ ಇರುತ್ತದೆ ಎಂದು ತಿಳಿಸಿದ್ದಾರೆ.
ಹೆಚ್ಚಿನ ವಿವರಗಳಿಗೆ ಕೆಇಎ ವೆಬ್‌ಸೈಟ್‌ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಂದಿದ್ದಾರೆ.