ಬೆಂಗಳೂರು: ಕೋರಮಂಗಲದ ಮಹಿಳೆಯರ ಪಿಜಿಯಲ್ಲಿ (Koramangala Ladies PG) ಯುವತಿ ಕೃತಿ ಕುಮಾರಿ ಹತ್ಯೆ ಪ್ರಕರಣದ ಆರೋಪಿಯನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.
ಜು.23 ರಂದು ನಡೆದಿದ್ದ ಕೃತಿ ಕುಮಾರಿಯ ಹತ್ಯೆ ಕೇಸ್ ಆರೋಪಿ ಅಭಿಷೇಕ್‌ನನ್ನು ಶನಿವಾರ ಮಧ್ಯಪ್ರದೇಶದಲ್ಲಿ (Madhya Pradesh) ಪೊಲೀಸರು ಬಂಧಿಸಿ, ವಿಮಾನದ ಮೂಲಕ ಬೆಂಗಳೂರಿಗೆ ಕರೆತಂದಿದ್ದರು. ಬಳಿಕ ಕೋರ್ಟ್ ಮುಂದೆ ಹಾಜರು ಪಡಿಸಿದ್ದರು. ಈ ವೇಳೆ ವಿಚಾರಣೆ ನಡೆಸಲು ಅವಕಾಶ ಕೋರಿದ್ದರಿಂದ ಕೋರ್ಟ್ 10 ದಿನಗಳ ಕಾಲ ಕಸ್ಟಡಿಗೆ ನೀಡಿ ಆದೇಶಿಸಿತು. ಇದನ್ನೂ ಓದಿ: ಬೆಂಗಳೂರಿನ ಹೋಟೆಲ್, ಪಬ್, ಬಾರ್ & ರೆಸ್ಟೋರೆಂಟ್‌ಗಳಿಗೆ ಹೊಸ ರೂಲ್ಸ್ – ಇಲ್ಲಿದೆ ಡೀಟೆಲ್ಸ್
ಈ ಕುರಿತು ಪ್ರತಿಕ್ರಿಯೆ ನೀಡಿದ ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತೀಮಾ, ಕೃತಿ ಕುಮಾರಿ ಕೊಲೆ ಪ್ರಕರಣದಲ್ಲಿ ಮಧ್ಯಪ್ರದೇಶದಲ್ಲಿ ಆರೋಪಿಯನ್ನು ಬಂಧಿಸಿದ್ದೇವೆ. ಈಗಷ್ಟೇ ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ಯಾವ ಕಾರಣಕ್ಕೆ ಕೊಲೆಯಾಗಿದೆ ಅನ್ನೋದು ತಿಳಿಯಬೇಕಿದೆ. ಆರೋಪಿ ಅಭಿಷೇಕ್ ಎಂಬಿಎ ಓದಿಕೊಂಡು ಬೆಂಗಳೂರಿಗೆ ಬಂದಿದ್ದಾನೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ. ಆರೋಪಿ ತನ್ನ ಸಹೋದರನ ಜೊತೆಗೆ ವಾಸವಿದ್ದ ಅನ್ನೋದು ಗೊತ್ತಾಗಿದೆ. ಆರೋಪಿಯ ವಿಚಾರಣೆಯ ನಂತರವಷ್ಟೇ ಎಲ್ಲಾ ವಿಚಾರಗಳು ತಿಳಿಯಬೇಕಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಜ್ಯದ ಜನರಿಗೆ ಮತ್ತೊಂದು ಶಾಕ್ – ಬಸ್ ಪ್ರಯಾಣ ದರ ಹೆಚ್ಚಿಸಲು KSRTCಯಿಂದ ಪ್ರಸ್ತಾವನೆ ಸಲ್ಲಿಕೆ
ಜುಲೈ 23ರ ರಾತ್ರಿ 11ರ ವೇಳೆಗೆ ಪಿಜಿಗೆ ನುಗ್ಗಿದ್ದ ಅಭಿಷೇಕ್, 3ನೇ ಮಹಡಿಯಲ್ಲಿದ್ದ ಕೃತಿ ಕುಮಾರಿಯ ಕೊಠಡಿ ಬಾಗಿಲು ತೆಗೆಯುತ್ತಿದ್ದಂತೆ ಏಕಾಏಕಿ ಮನಸೋ ಇಚ್ಛೆ ಚಾಕುವಿನಿಂದ ಇರಿದು ಹತ್ಯೆ ಮಾಡಿ ಪರಾರಿಯಾಗಿದ್ದ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಯನ್ನು ಗುರುತಿಸಿದ್ದರು. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸಾಲ ಮಾಡ್ಕೊಂಡು ರಾಜಕಾರಣ ಮಾಡಿದ್ದೇನೆ, ನನ್ನಂಥ ರಾಜಕಾರಣಿ ದೇಶದಲ್ಲೇ ಇಲ್ಲ: ಜಿಟಿಡಿ