ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ (PG Medical Course) ಪ್ರವೇಶಕ್ಕೆ ಸಂಬಂಧಿಸಿದಂತೆ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ನಂತರ ಇನ್ನೂ 783 ಸೀಟು ಉಳಿದಿದ್ದು, ಅವುಗಳ ಹಂಚಿಕೆಗೆ ಮಾ.11ರಂದು ಮತ್ತೊಂದು ಸುತ್ತಿನ ಕೌನ್ಸೆಲಿಂಗ್ ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ತಿಳಿಸಿದ್ದಾರೆ.
ಇದುವರೆಗೂ ಯಾವುದೇ ಸುತ್ತಿನಲ್ಲಿ ಸೀಟು ಹಂಚಿಕೆಯಾಗದವರು ಇದರ ಉಪಯೋಗ ಪಡೆಯಬಹುದು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಪರಿಷತ್ ಶಿಕ್ಷಕರ, ಪದವೀಧರ ಕ್ಷೇತ್ರ; ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್
ಯಾವ ಕಾಲೇಜಿನಲ್ಲಿ, ಯಾವ ಕೋರ್ಸ್‌ನ ಸೀಟು ಉಳಿದಿವೆ ಹಾಗೂ ಅದರ ಶುಲ್ಕ ಎಷ್ಟು ಎನ್ನುವುದನ್ನು ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ತಮಗೆ ಯಾವ ಕೋರ್ಸ್ ಇಷ್ಟ ಇದೆಯೋ ಅದರ ಪೂರ್ಣ ಶುಲ್ಕದ ಡಿ.ಡಿ ಅಥವಾ ಚೆಕ್ ಸಮೇತ ಮಾರ್ಚ್ 11ರಂದು ಮಧ್ಯಾಹ್ನ 3 ಗಂಟೆಯೊಳಗೆ ಮಲ್ಲೇಶ್ವರದ ಕೆಇಎ ಕಚೇರಿಗೆ ಬಂದು ಸಲ್ಲಿಸಬೇಕು. ಡಿ.ಡಿ ಅಥವಾ ಚೆಕ್ ಅನ್ನು ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಮಲ್ಲೇಶ್ವರ, ಬೆಂಗಳೂರು- ಇವರ ಹೆಸರಿನಲ್ಲಿ ಪಡೆಯಬೇಕು ಎಂದು ಅವರು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ರಾಜೀನಾಮೆ
ಡಿ.ಡಿ ಜೊತೆಗೆ ಎಲ್ಲ ಮೂಲ ದಾಖಲೆಗಳನ್ನು ಸಲ್ಲಿಸಿದವರಿಗೆ ಮಾತ್ರ ಮಾ.11ರಂದು ಮಧ್ಯಾಹ್ನ 12:30ರಿಂದ ಸಂಜೆ 4 ಗಂಟೆವರೆಗೆ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗುತ್ತದೆ. ಅದೇ ದಿನ ಸಂಜೆ 7 ಗಂಟೆಗೆ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುತ್ತದೆ. ಸೀಟು ಹಂಚಿಕೆಯಾದವರು ಮಾ.12ರಂದು ಸಂಜೆ 5:30ರೊಳಗೆ ಸಂಬಂಧಪಟ್ಟ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಅವರು ವಿವರಿಸಿದ್ದಾರೆ. ಇದನ್ನೂ ಓದಿ: ಸಿಂಗಾಪುರ್ ಮಾದರಿಯಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣ ಅಭಿವೃದ್ಧಿ: ರಾಮಲಿಂಗಾ ರೆಡ್ಡಿ

