ಫೋಟೋ ಆಲ್ಬಂ : ‘ಕ್ಲಬ್ ಅವಿವಾ-ಅಭಿ’ ಪಾರ್ಟಿಯಲ್ಲಿ ಪಾಲ್ಗೊಂಡ ತಾರೆಯರು

Public TV
2 Min Read
Club Aviva 1

ಭಿಷೇಕ್ ಅಂಬರೀಶ್ ಮತ್ತು ಅವಿವಾ ಬಿಡಪ್ಪ ಮದುವೆ ನಂತರ ಅವರ ಆಪ್ತರಿಗಾಗಿ ಪಾರ್ಟಿಯೊಂದನ್ನು ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ನಲ್ಲಿ ಆಯೋಜನೆ ಮಾಡಲಾಗಿತ್ತು. ಈ ಪಾರ್ಟಿಯಲ್ಲಿ ಸ್ಯಾಂಡಲ್ ವುಡ್ ಹಲವು ತಾರೆಯರು ಆಗಮಿಸಿದ್ದರು. ಅಂಬರೀಶ್ ಅವರ ಜನಪ್ರಿಯ ಹಾಡಿಗೆ ನೃತ್ಯ ಕೂಡ ಮಾಡಿದರು.

Club Aviva 5

ಅದರಲ್ಲೂ ಅಂಬಿ ನಿಂಗ್ ವಯಸ್ಸಾಯ್ತೋ ಸಿನಿಮಾದ ಫೇಮಸ್ ಸಾಂಗ್ ‘ಹೇ ಜಲೀಲಾ..’ ಹಾಡಿಗೆ ಸುಮಲತಾ (Sumalatha) ಅಂಬರೀಶ್ ಜೊತೆ ಯಶ್ (Yash) ಡಾನ್ಸ್ ಮಾಡಿದರು. ನಂತರ ಇವರಿಗೆ ಅಭಿಷೇಕ್ ಮತ್ತು ಅವಿವಾ ಕೂಡ ಸಾಥ್ ನೀಡಿದ್ದು ವಿಶೇಷವಾಗಿತ್ತು.

Club Aviva 2

ಕಬ್ಲ್ ಅವಿವಾ (Club Aviva) ಹೆಸರಿನಲ್ಲಿ ಆಯೋಜನೆಯಾಗಿದ್ದ ಪಾರ್ಟಿಯಲ್ಲಿ (Aviva, Party) ಜಯಪ್ರದಾ, ಮಾಲಾಶ್ರೀ, ರಮ್ಯಕೃಷ್ಣ, ಯಶ್, ರಾಕ್ ಲೈನ್ ವೆಂಕಟೇಶ್, ಸೇರಿದಂತೆ ಹಲವು ನಾಯಕಿಯರು ಕೂಡ ಹಾಜರಿದ್ದರು. ಇದನ್ನೂ ಓದಿ:ಮೆಗಾ ಪ್ರಿನ್ಸ್ ವರುಣ್ ತೇಜ್- ಲಾವಣ್ಯ ತ್ರಿಪಾಠಿ ಗ್ರ್ಯಾಂಡ್‌ ಎಂಗೇಜ್‌ಮೆಂಟ್

Club Aviva 3

ಅಭಿಷೇಕ್ ಅಂಬರೀಶ್ (Abhishek Ambarish) ಹಾಗೂ ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿರುವ ಅವಿವಾ ಬಿಡಪ್ಪ (Aviva Bidappa) ಮೊನ್ನೆಯಷ್ಟೇ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಗೌಡರ ಸಂಪ್ರದಾಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವಿವಾಗೆ ಮಾಂಗಲ್ಯ ಧಾರಣೆ ಮಾಡುವ ಮೂಲಕ ದೀರ್ಘಕಾಲದ ಗೆಳತಿಯೊಂದಿಗೆ ಹಸೆಮಣೆ ಏರಿದ್ದಾರೆ.

Club Aviva 1

ಈ ಮದುವೆಗೆ (Marriage) ಅನೇಕ ಗಣ್ಯರು ಸಾಕ್ಷಿಯಾಗಿದ್ದರು ನಟ ರಜನಿಕಾಂತ್, ತೆಲುಗು ನಟ ಚಿರಂಜೀವಿ,  ಕ್ರಿಕೆಟಿಗ ಅನಿಲ್ ಕುಂಬ್ಳೆ, ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ತಮಿಳು ನಟ ಮೋಹನ್ ಬಾಬು, ತೆಲುಗು ನಟ ನರೇಶ್, ನಟಿ ಪವಿತ್ರ ಲೋಕೇಶ್, ನಟಿ ಶುಭ್ರ ಅಯ್ಯಪ್ಪ, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಗಾಯಕ ವಿಜಯ್ ಪ್ರಕಾಶ್ ಸೇರಿದಂತೆ ಸಾಕಷ್ಟು ಕಲಾವಿದರು ಹಾಗೂ ತಂತ್ರಜ್ಞರು ಆಗಮಿಸಿದ್ದರು.

 

ಅಭಿಷೇಕ್- ಭಾರತದ ಖ್ಯಾತ ಫ್ಯಾಷನ್ ಡಿಸೈನರ್ ಶ್ರೀಪ್ರಸಾದ್ ಬಿಡಪ ಅವರ ಪುತ್ರಿ ಅವಿವ ಅವರು ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಗುರುಹಿರಿಯರ ಒಪ್ಪಿಗೆಯರ ಮೇರೆಗೆ ಇದೀಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಳೆದ ವಾರಗಳಿಂದ ಅಂಬಿ ಮನೆಯಲ್ಲಿ ಸಡಗರ ಮನೆಮಾಡಿತ್ತು. ಅಂಬರೀಷ್ ಅವರ ಮನೆ ಮುಂದೆ ಹಸಿರು ಚಪ್ಪರ ಹಾಕಲಾಗಿತ್ತು. ತಳಿರು ತೋರಣಗಳಿಂದ ಮನೆಯನ್ನು ಸಿಂಗರಿಸಲಾಗಿತ್ತು.

Share This Article