ಇಂದು ಕರ್ನಾಟಕದ (Karnataka) 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ತಳಮಟ್ಟದ ಹೋರಾಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ ಕನಕಪುರ ಬಂಡೆ ಡಿ.ಕೆ. ಶಿವಕುಮಾರ್ (DK Shivakumar) ಅವರು ಕರ್ನಾಟಕದ (Karnataka) ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಪ್ರಮಾಣ ವಚನ ಸ್ವೀಕರಿಸುವ ಮೊದಲು ವೇದಿಕೆಯಲ್ಲಿ ಡಿಕೆ ಶಿವಕುಮಾರ್ ನೆಲಕ್ಕೆ ಅಡ್ಡ ಬಿದ್ದು ನಮಸ್ಕರಿಸಿದರು. ಬಳಿಕ ಅಜ್ಜಯ್ಯನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ್ದು ವಿಶೇಷವಾಗಿತ್ತು.
ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸುವುದರ ಜೊತೆಗೆ 13 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಡಿಕೆಶಿ ಪ್ರಮಾಣ ವಚನದಿಂದ ಹಿಡಿದು ಸಚಿವರು ಪ್ರಮಾಣ ವಚನ ಸ್ವೀಕರಿಸಿದ ವಿಶೇಷ ಕ್ಷಣಗಳು ಫೋಟೋದಲ್ಲಿ ಸೆರೆಯಾಗಿದೆ.









