ಚಂಡೀಗಢ: ಬೆಂಬಲ ಬೆಲೆ ಖಾತ್ರಿ ಪಡಿಸುವ ಕಾನೂನು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪಂಜಾಬ್ ಮತ್ತು ಹರಿಯಾಣ ರೈತರು ಕೈಗೊಂಡಿರುವ ‘ದೆಹಲಿ ಚಲೋ’ ಪ್ರತಿಭಟನೆಯು (Delhi Chalo Protest) ಹರ್ಯಾಣದ ಶಂಭು ಗಡಿ ಸೇರಿದಂತೆ ಹಲವೆಡೆ ಹಿಂಸಾಚಾರಕ್ಕೆ ತಿರುಗಿದ್ದು, ಕಿಡಿಗೇಡಿಗಳು ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದಾರೆ.
ಇತ್ತೀಚೆಗೆ ವೈರಲ್ ಆದ ವೀಡಿಯೋವೊಂದರಲ್ಲಿ, ರೈತರ ಪ್ರತಿಭಟನೆಯಲ್ಲಿ (Farmers Protest) ನಿಹಾಂಗ್ ಸಿಖ್ಖರು ಭದ್ರತಾ ಪಡೆಗಳತ್ತ ಕತ್ತಿ ಬೀಸುತ್ತಿರುವ ಭಯಾನಕ ದೃಶ್ಯ ಕಂಡು ಬಂದಿವೆ. ಅಲ್ಲದೇ ತಾನು ರೈತ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ಪ್ರಚೋದನಕಾರಿಯಾಗಿ ತೊಡೆ ತಟ್ಟಿ ಸಡ್ಡು ಹೊಡೆದಿದ್ದಾನೆ. ಇದೇ ವೇಳೆ ಕೆಲವರು ಬಿಲ್ಲು ಬಾಣ ಹಿಡಿದು ತಿರುಗಾಡುತ್ತಿರುವುದು ಕಂಡುಬಂದಿದೆ.
Advertisement
Advertisement
ಅಲ್ಲದೇ ಪ್ರತಿಭಟನಾಕಾರರ ಟ್ರಕ್‌ನಲ್ಲಿ ಖಲಿಸ್ತಾನಿ ಉಗ್ರ (Khalistan Terrorist) ಭಿಂದ್ರನ್ ವಾಲೆ ಭಾವಚಿತ್ರವಿರುವುದೂ ಕಂಡುಬಂದಿದೆ. ಹೀಗಾಗಿ ರೈತರ ಹೋರಾಟವನ್ನು ಕೆಲ ದುಷ್ಕರ್ಮಿಗಳು ದೇಶ ವಿರೋಧಿ ಚಟುವಟಿಕೆಗಳಿಗೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ಇದನ್ನೂ ಓದಿ: ರೈತರ ಪ್ರತಿಭಟನೆಗೆ ಮಣಿಯಿತಾ ಸರ್ಕಾರ – ರೈತ ಪ್ರತಿನಿಧಿಗಳನ್ನೊಳಗೊಂಡ ಸಮಿತಿ ರಚನೆ ಪ್ರಸ್ತಾಪಿಸುವ ಸಾಧ್ಯತೆ?
Advertisement
Advertisement
2021ರಲ್ಲಿಯೂ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ರೈತರು ದೊಡ್ಡಮಟ್ಟದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಆಗಲೂ ಇದೇ ರೀತಿ ಹಿಂಸಾಚಾರ ನಡೆದಿತ್ತು. ದೆಹಲಿ ಪ್ರವೇಶಿಸಲು ಹೊರಟಿದ್ದ ರೈತರನ್ನು ಪಂಜಾಬ್ ಮತ್ತು ಹರಿಯಾಣ ಗಡಿಗಳಲ್ಲಿ ತಡೆಹಿಡಿಯಲಾಗಿತ್ತು. ಅದೇ ರೀತಿ ಶನಿವಾರ ಅಂಬಾಲಾ ಬಳಿಯ ಶಂಭು ಗಡಿಯಲ್ಲಿ ಬ್ಯಾರಿಕೇಡ್‌ಗಳನ್ನು ಕಡೆವಲು ಯತ್ನಿಸುತ್ತಿದ್ದ ಪ್ರತಿಭಟನಾಕಾರರನ್ನು ಚದುರಿಸಲು ಭದ್ರತಾ ಸಿಬ್ಬಂದಿ ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಿದ್ದರು. ಘಟನೆಗಳಲ್ಲಿ ಅನೇಕ ಭದ್ರತಾ ಪಡೆಗಳು ಹಾಗೂ ಪತ್ರಕರ್ತರೂ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸದ್ಯ ರೈತರ ಪ್ರತಿಭಟನೆ 6ನೇ ದಿನಕ್ಕೆ ಕಾಲಿಟ್ಟಿದೆ. ಇಂದು (ಫೆ.18) ಕೇಂದ್ರ ಸರ್ಕಾರ 4ನೇ ಬಾರಿಗೆ ರೈತರೊಂದಿಗೆ ಮಾತುಕತೆ ನಡೆಸಲಿದೆ ಎಂದು ರೈತ ಸಂಘಟನೆಯ ಮುಖಂಡರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ಗೆ ಇಂದಿರಾ ಗಾಂಧಿ 3ನೇ ಮಗ ಶಾಕ್? – ಪುತ್ರನ ಜೊತೆ ಕಮಲ್‌ನಾಥ್ ಬಿಜೆಪಿ ಸೇರ್ಪಡೆ?