ಜೈಪುರ: ರಾಜಸ್ಥಾನದ ರಾಜಧಾನಿ ಗುಲಾಬಿ ನಗರದಲ್ಲಿ ಬಿಜೆಪಿ ಸಚಿವರೊಬ್ಬರು ರಸ್ತೆ ಬದಿಯಲ್ಲಿ ಮೂತ್ರ ವಿಸರ್ಜನೆ ಮಾಡಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ರಾಜಸ್ಥಾನ ಸರ್ಕಾರದ ಆರೋಗ್ಯ ಸಚಿವರಾಗಿರುವ ಕಾಲಿಚಂದ್ರನ್ ಸರಾಫ್ ರಸ್ತೆ ಬದಿಯಲ್ಲಿ ಮೂತ್ರ ಮಾಡುತ್ತಿರುವ ಫೋಟೋ ಎಲ್ಲೆಡೆ ಹರಿದಾಡುತ್ತಿದೆ. ಈ ಬಗ್ಗೆ ಸಚಿವರನ್ನು ಪ್ರಶ್ನಿದ್ರೆ ಅದೇನು ದೊಡ್ಡ ವಿಷಯವಲ್ಲ ಅಂತಾ ಹೇಳಿದ್ದಾರೆ.
Advertisement
ಜೈಪುರ ಮುನ್ಸಿಪಲ್ ಕಾರ್ಪೋರೇಷನ್ ನಗರವನ್ನು ಸ್ವಚ್ಛ ಭಾರತ ಯೋಜನಡಿಯ ಪಟ್ಟಿಯಲ್ಲಿ ಮೇಲೆ ತರಲು ಸಾಕಷ್ಟು ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿದೆ. ಆದ್ರೆ ರಾಜ್ಯ ಸಚಿವರು ರಸ್ತೆ ಬದಿ ಮೂತ್ರ ವಿಸರ್ಜನೆ ಮಾಡಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದೆ.
Advertisement
Advertisement
ಸಾಮಾನ್ಯವಾಗಿ ಸಾರ್ವಜನಿಕರು ರಸ್ತೆ ಬದಿ ಮೂತ್ರ ವಿಸರ್ಜನೆ ಮಾಡುವ ವ್ಯಕ್ತಿಗಳಿಗೆ 200 ರೂ. ದಂಡ ವಿಧಿಸಲಾಗುತ್ತದೆ. ಫೋಟೋ ವೈರಲ್ ಆಗುತ್ತಿದ್ದಂತೆ ಸಚಿವರನ್ನು ಮಾಧ್ಯಮಗಳು ಪ್ರಶ್ನಿಸಿದಾಗ, ಮಾತನಾಡುವುದಕ್ಕೆ ಅದೇನು ಅಂತಹ ದೊಡ್ಡ ವಿಷಯವಲ್ಲ ಎಂದು ಹೇಳುವ ಮೂಲಕ ನುಣುಚಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಇದನ್ನೂ ಓದಿ: ಸ್ವಚ್ಛ ಭಾರತಕ್ಕೆ ಅವಮಾನ: ಸಾರ್ವಜನಿಕ ಸ್ಥಳದಲ್ಲಿ ಕೇಂದ್ರ ಕೃಷಿ ಸಚಿವರ ಸೂಸು
Advertisement
ನಾಚಿಕೆಯ ಕೆಲಸ: ಸ್ವಚ್ಛ ಭಾರತ್ ಅಭಿಯಾನಕ್ಕಾಗಿ ಕೇಂದ್ರ ಸರ್ಕಾರ ಸಾಕಷ್ಟು ಹಣವನ್ನು ವ್ಯಯ ಮಾಡುತ್ತಿದೆ. ಬಿಜೆಪಿಯ ಇಂತಹ ನಾಯಕರಿಂದ ಸಾರ್ವಜನಿಕರಿಗೆ ತಪ್ಪು ಸಂದೇಶ ರವಾನೆಯಾಗುತ್ತದೆ. ಸಚಿವರು ತಾವು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರದ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾರೆ. ಇದೊಂದು ನಾಚಿಕೆಗೇಡಿನ ಕೆಲಸ ಎಂದು ರಾಜಸ್ಥಾನದ ಕಾಂಗ್ರೆಸ್ ಘಟಕದ ಉಪಾಧ್ಯಕ್ಷೆ ಅರ್ಚನಾ ಶರ್ಮಾ ಗುಡುಗಿದ್ದಾರೆ.
ಬಿಜೆಪಿ ವಿರೋಧಿಗಳು ಸ್ವಚ್ಛ ಭಾರತಕ್ಕೆ ಕಾಲಿಚಂದ್ರನ್ ಸರಾಫ್ ಉಡುಗೊರೆ ನೀಡಿದ್ದಾರೆ ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಫೋಟೋವನ್ನು ಅಪ್ಲೋಡ್ ಮಾಡಿ ಟೀಕಿಸುತ್ತಿದ್ದಾರೆ.
ಈ ಹಿಂದೆ ಧೋಲ್‍ಪುರ ಉಪ ಚುನಾವಣೆಯ ಪ್ರಚಾರದ ವೇಳೆಯಲ್ಲಿ ಸಚಿವರಾದ ಕಾಲಿಚಂದ್ರನ್ ಸರಾಫ್ ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾರೆ. ನಾನು ಚುನಾವಣಾ ಪ್ರಚಾರದ ಒತ್ತಡದಲ್ಲಿ ಇದ್ದಿದರಿಂದ ಅಂದು ನನಗೆ ಫೋಟೋ ತೆಗೆಯಲು ಸಾಧ್ಯವಾಗಿರಲಿಲ್ಲ ಅಂತಾ ಅರ್ಚನಾ ಶರ್ಮಾ ತಿಳಿಸಿದ್ದಾರೆ.
ಕೋಟಾ ಕ್ಷೇತ್ರದ ಬಿಜೆಪಿ ನಾಯಕ ಅಶೋಕ್ ಚೌಧರಿ ರಾಜಸ್ಥಾನದಲ್ಲಿ ಸಿಎಂ ವಸುಂಧರಾ ರಾಜೆ ಅವರ ಆಡಳಿಯ ವೈಖರಿಯ ಬಗ್ಗೆ ಅಸಮಧಾನ ವ್ಯಕ್ತಪಡಿಸಿ ಬಿಜೆಪಿ ರಾಷ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. ಇತ್ತೀಚೆಗೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗಬೇಕೆಂದು ಎಂದು ಬಿಜೆಪಿ ಶಾಸಕ ಜ್ಞಾನದೇವ್ ಅಹುಜಾ ಮಾತನಾಡಿರುವ ಆಡಿಯೋ ಕ್ಲಿಪ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.
ರಾಜಸ್ಥಾನದಲ್ಲಿ ನಡೆದ ಮೂರು ಕ್ಷೇತ್ರಗಳ (ಎರಡು ಲೋಕಸಭಾ, ಒಂದು ವಿಧಾನಸಭಾ ಕ್ಷೇತ್ರ)ಲ್ಲಿ ಕಾಂಗ್ರೆಸ್ ಜಯ ಸಾಧಿಸಿದೆ. ಇತ್ತೀಚಿನ ಕೆಲವು ದಿನಗಳಿಂದ ಆಡಳಿತ ಸರ್ಕಾರ ಅನಗತ್ಯ ವಿಷಯಗಳಿಗಾಗಿ ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ.