‘ಕಾಂತಾರ’ ಚಿತ್ರಕ್ಕಾಗಿ ನಡೆದ ಫೋಟೋ ಶೂಟ್ : ಲೀಲಾ ಮತ್ತು ಶಿವ ಮುದ್ದು ಮುದ್ದು

Public TV
2 Min Read
FotoJet 56

ಕಾಂತಾರ (Kantara) ಸಿನಿಮಾದ ನಂತರ ಈ ಸಿನಿಮಾದ ನಾಯಕಿ ಸಪ್ತಮಿ ಗೌಡಗೆ (Sapthami Gowda) ಸಖತ್ ಡಿಮಾಂಡ್ ಕ್ರಿಯೇಟ್ ಆಗಿದೆ. ಕನ್ನಡದಲ್ಲೇ ಈಗಾಗಲೇ ಎರಡು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ಈ ಹೊತ್ತಲ್ಲಿ ಸಪ್ತಮಿ ಗೌಡ ಕಾಂತಾರ ಸಿನಿಮಾದ ಲೀಲಾ ಪಾತ್ರಕ್ಕಾಗಿ ನಡೆಸಿದ ಫೋಟೋ ಶೂಟ್ (Photoshoot) ಆಚೆ ಬಂದಿದೆ. ಈ ಫೋಟೋದಲ್ಲಿ ಸಪ್ತಮಿ ಗೌಡ ಸಖತ್ ಆಗಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ರಿಷಬ್ ಶೆಟ್ಟಿ (Rishabh Shetty) ಕೂಡ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.

FotoJet 2 36

ಈ ನಡುವೆ ಸಪ್ತಮಿ ಗೌಡ ಅವರಿಗೆ ಪರಭಾಷೆಯಿಂದಲೂ ಅವರಿಗೆ ಅವಕಾಶಗಳು ಹುಡುಕಿಕೊಂಡು ಬರುತ್ತಿವೆ. ಪರಭಾಷೆಯಿಂದ ಆಫರ್ಸ್ ಬರುತ್ತಿವೆ ಎಂದು ಅವರು ಈಗಾಗಲೇ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಅದಕ್ಕೂ ಮುನ್ನ ಕನ್ನಡದ ಮತ್ತೊಂದು ಸಿನಿಮಾದಲ್ಲಿ ಅವರು ನಟಿಸುವ ಸಾಧ್ಯತೆ ಇದ್ದು, ಮಾತುಕತೆ ಕೂಡ ಆಗಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ಪತಿ ರಘು ಮುಖರ್ಜಿ ಮಾತಿಗೆ ಕಣ್ಣೀರಿಟ್ಟ ಅನುಪ್ರಭಾಕರ್

FotoJet 1 41

ಪೈಲ್ವಾನ್ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿರುವ ಕೃಷ್ಣ ಇದೀಗ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಅವರಿಗೆ ಸಿನಿಮಾವೊಂದು ಮಾಡುತ್ತಿದ್ದು, ಈಗಾಗಲೇ ಚಿತ್ರಕ್ಕೆ ಕಾಳಿ ಎಂದು ಹೆಸರಿಡಲಾಗಿದೆ. ಸಿನಿಮಾ ಟೈಟಲ್ ಸೇರಿದಂತೆ ಹಲವು ವಿಚಾರಗಳನ್ನೂ ಕೃಷ್ಣ ಮಾಧ್ಯಮಗಳ ಜೊತೆ ಹಂಚಿಕೊಂಡಿದ್ದಾರೆ. ಇದೇ ಸಿನಿಮಾಗೆ ಸಪ್ತಮಿ ಗೌಡ  ಅವರನ್ನೂ ಕೇಳಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ.

FotoJet 3 28

ಸಪ್ತಮಿ ಗೌಡ ಅವರನ್ನು ಕೃಷ್ಣ  ಭೇಟಿಯಾಗಿ ಸಿನಿಮಾದ ಕಥೆ ಮತ್ತು ಪಾತ್ರದ ಹಿನ್ನೆಲೆಯನ್ನು ಹೇಳಿದ್ದಾರೆ ಎಂದು ಗೊತ್ತಾಗಿದ್ದು, ಬಹುಶಃ ಸಪ್ತಮಿ ಅವರೇ ಈ ಚಿತ್ರದ ನಾಯಕಿ ಎನ್ನುತ್ತಿದೆ ಗಾಂಧಿ ನಗರ ಮೂಲ. ಆದರೆ, ಈ ಕುರಿತು ಕೃಷ್ಣ ಆಗಲಿ ಅಥವಾ ಸಪ್ತಮಿ ಗೌಡ ಆಗಲಿ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ. ಮುಂದಿನ ದಿನಗಳಲ್ಲಿ ಹೇಳುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ.

FotoJet 5 6

ಕಾಳಿ ಸಿನಿಮಾದ ಕಥೆಯೂ ರೋಚಕವಾಗಿದೆ. ಕಾವೇರಿ ನದಿ ಗಲಾಟೆಯಲ್ಲಿ ನಡೆದಂತಹ ನೈಜ ಪ್ರೇಮಕಥೆಯನ್ನು ಈ ಸಿನಿಮಾಗಾಗಿ ನಿರ್ದೇಶಕರು ಅಳವಡಿಸಿಕೊಂಡಿದ್ದಾರೆ. ಅಲ್ಲದೇ, ರೆಬಲ್ ಈ ಸಿನಿಮಾದಲ್ಲಿ ರಗಡ್ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದು, ಈಗಾಗಲೇ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದೆ. ಸದ್ಯ ಅಭಿಷೇಕ್ ಬ್ಯಾಡ್ ಮ್ಯಾನರ್ಸ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಸದ್ಯದಲ್ಲೇ ಕಾಳಿ ಸಿನಿಮಾದ ಶೂಟಿಂಗ್ ನಲ್ಲೂ ಅವರು ಪಾಲ್ಗೊಳ್ಳಲಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *