17ನೇ ಆವೃತ್ತಿಯ ಐಪಿಎಲ್ ಟೂರ್ನಿ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಕೋಲ್ಕತ್ತಾ ನೈಟ್ ರೈರ‍್ಸ್ ಚಾಂಪಿಯನ್ಸ್ ಆಗಿ ಹೊರಹೊಮ್ಮಿದೆ. 2012 ಮತ್ತು 2014ರಲ್ಲಿ ಗೌತಮ್ ಗಂಭೀರ್ ನಾಯಕತ್ವದಲ್ಲಿ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದ್ದ ಕೋಲ್ಕತ್ತಾ ನೈಟ್‌ರೈಡರ್ಸ್ ತಂಡ 10 ವರ್ಷಗಳ ಬಳಿಕ ಶ್ರೇಯಸ್ ಅಯ್ಯರ್ ಅವರ ನಾಯಕತ್ವದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಚೆನ್ನೈನ ಚೆಪಾಕ್ ಕ್ರೀಡಾಂಗಂಣದಲ್ಲಿ ಸೂಪರ್ ಸಂಡೇ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಕೆಕೆಆರ್ ಗೆದ್ದ ಬಳಿಕ ಇಡೀ ಕ್ರೀಡಾಂಗಣದ ತುಂಬ ಹಬ್ಬದ ವಾತಾವರಣವೇ ನಿರ್ಮಾಣವಾಗಿತ್ತು. ಕ್ರೀಡಾಳುಗಳು ಕುಣಿದು ಕುಪ್ಪಳಿಸಿದರು. ಟ್ರೋಫಿ ಎತ್ತಿ ಮುದ್ದಾಡಿದರು, ಒಬ್ಬರನ್ನೊಬ್ಬರು ಅಪ್ಪಿಕೊಂಡು ಭಾವುಕರಾದರು. ಈ ಸಂಭ್ರಮದ ಪ್ರತಿಯೊಂದು ಕ್ಷಣವೂ ಕ್ಯಾಮೆರಾ ಕಣ್ಣಿಗೆ ಸೆರೆಯಾಗಿದೆ. ಅವುಗಳನ್ನು ಕಣ್ತುಂಬಿಕೊಳ್ಳಲು ಮುಂದೆ ನೋಡಿ…
