ನಟಿ ರಾಧಿಕಾ ಕುಮಾರಸ್ವಾಮಿ ವಿಶ್ವ ಯೋಗ ದಿನದ ಸಂದರ್ಭದಲ್ಲಿ ತಾವು ಯೋಗ (Yoga) ಮಾಡುತ್ತಿರುವ ಫೋಟೋಗಳನ್ನು (Photo) ಶೇರ್ ಮಾಡಿದ್ದಾರೆ. ಆ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ (Viral) ಆಗಿವೆ.
ಹಲವು ವರ್ಷಗಳಿಂದ ನಿತ್ಯವೂ ಯೋಗ ಮಾಡುತ್ತಿರುವುದಾಗಿ ಈ ಹಿಂದೆಯೇ ಅವರು ಹೇಳಿಕೊಂಡಿದ್ದರು. ಅದಕ್ಕಾಗಿ ಸಮಯವನ್ನೂ ಅವರು ಮೀಸಲಿಟ್ಟಿರುವ ಕುರಿತು ಮಾತನಾಡಿದ್ದರು. ಇದನ್ನೂ ಓದಿ:ಲೈಂಗಿಕ ಕಿರುಕುಳ ಆರೋಪ: ಧಾರಾವಾಹಿ ನಿರ್ಮಾಪಕನ ಮೇಲೆ ಎಫ್.ಐ.ಆರ್ ದಾಖಲು
ಕೇವಲ ಯೋಗ ಮಾತ್ರವಲ್ಲ ಅವರು ಡ್ಯಾನ್ಸ್ ಮೂಲಕವೂ ಫಿಟ್ ನೆಸ್ ಕಾಪಾಡಿಕೊಂಡು ಬಂದಿದ್ದಾರೆ. ಜೊತೆಗೆ ಜಿಮ್ ನಲ್ಲೂ ಹಲವು ಗಂಟೆಗಳನ್ನು ಕಳೆಯುತ್ತಾರೆ. ಹಾಗಾಗಿ ಇನ್ನೂ ಹದಿನಾರರ ಬಾಲೆಯಂತೆ ರಾಧಿಕಾ ಕಾಣಿಸುತ್ತಾರೆ.
ಯೋಗ ದಿನದ ನಿಮಿತ್ತವಾಗಿ ಯೋಗ ಮಾಡುತ್ತಿರುವ ಫೋಟೋಗಳನ್ನು ಅವರು ಶೇರ್ ಮಾಡಿದ್ದು, ಫೋಟೋದ ಜೊತೆಗೆ ‘ಭವಿಷ್ಯದ ಬಗ್ಗೆ ಚಿಂತೆ ಬೇಡ, ಹಳೆಯದನ್ನು ಮರೆತು ಬಿಡಿ’ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಬಂದಂತೆ ಜೀವನವನ್ನು ನಡೆಸಿಕೊಂಡು ಹೋಗಿ ಎಂದು ಜೀವನ ಸಂದೇಶ ರವಾನಿಸಿದ್ದಾರೆ.
ಇತ್ತೀಚೆಗೆ ಮತ್ತೆ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದಾರೆ ರಾಧಿಕಾ ಕುಮಾರಸ್ವಾಮಿ (Radhika Kumaraswamy). ಅವರು ನಾಯಕಿಯಾಗಿ ನಟಿಸುತ್ತಿರುವ ‘ಅಜಾಗ್ರತ’ (Ajagrata) ಚಿತ್ರದ ಮುಹೂರ್ತ (Muhurta) ಸಮಾರಂಭ ಇತ್ತೀಚೆಗೆ ಹೈದರಾಬಾದ್ (Hyderabad) ನ ರಾಮನಾಯ್ಡು ಸ್ಟುಡಿಯೋದಲ್ಲಿ ನೆರವೇರಿದೆ.
ಬಾಲಿವುಡ್ ನ ಖ್ಯಾತ ನಟ ಶ್ರೇಯಸ್ ತಲ್ಪಾಡೆ (Shreyas Talpade) ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ರಾಧಿಕಾ ಕುಮಾರಸ್ವಾಮಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ರಾವ್ ರಮೇಶ್, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್, ದೇವರಾಜ್, ಜಯಪ್ರಕಾಶ್, ವಿನಯಾಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಏಳು ಭಾಷೆಗಳಲ್ಲಿ ಈ ಚಿತ್ರ ಬರಲಿದೆ. ಡಬ್ ಮಾಡದೆ, ಆಯಾ ಭಾಷೆಗಳಲ್ಲಿ ಪ್ರತ್ಯೇಕವಾಗಿ ಚಿತ್ರೀಕರಣ ನಡೆಯಲಿರುವುದು ಈ ಚಿತ್ರದ ವಿಶೇಷ . ಹಲವು ದಿನಗಳ ನಂತರ ಮತ್ತೆ ರಾಧಿಕಾ ಕುಮಾರಸ್ವಾಮಿ ಸಿನಿಮಾ ರಂಗಕ್ಕೆ ಬಂದಿರುವುದು ಅವರ ಅಭಿಮಾನಿಗಳಿಗೆ ಸಹಜವಾಗಿಯೇ ಸಂಭ್ರಮ ತಂದಿದೆ.