ಮುಂಬೈ: ಸೆಲಿಬ್ರೆಟಿಗಳ ಮೂಲಕ ಮತದಾರರನ್ನು ಸೆಳೆಯುವ ತಂತ್ರವನ್ನು ಅನೇಕ ಪಕ್ಷಗಳು ಮಾಡುತ್ತಿವೆ. ಇಂತಹ ಗಿಮಿಕ್‍ಗೆ ಸದ್ಯ ಬಾಲಿವುಡ್ ಬೆಡಗಿ ಕರೀನಾ ಕಪೂರ್ ಸಿಕ್ಕಿಕೊಂಡಿದ್ದಾರೆ.
ಹೌದು, ಬಾಲಿವುಡ್ ನಟಿ ಕರೀನಾ ಕಪೂರ್ ಮತ್ತು ಸೈಫ್ ಅಲಿಖಾನ್ ದಂಪತಿಯ ಪುತ್ರ ತೈಮೂರ್ ಅಲಿ ಖಾನ್ ‘ನಮೋ ಅಗೇನ್’ ಎಂದು ಬರೆದ ಟಿ-ಶರ್ಟ್ ಧರಿಸಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
Advertisement
Advertisement
ಕರೀನಾ ಕಪೂರ್ ಪುತ್ರ ತೈಮೂರ್ ಕೈ ಹಿಡಿದು ಹೋಗುತ್ತಿರುವ ಫೋಟೋ ಇದಾಗಿದೆ. ತೈಮೂರ್ ಟಿ-ಶರ್ಟ್ ಮೇಲೆ ಮೋದಿ ಮತ್ತೊಮ್ಮೆ ಎಂದು ಬರೆಯಲಾಗಿದೆ. ಆದರೆ ಅದನ್ನು ಸ್ವಲ್ಪ ಸೂಕ್ಷ್ಮವಾಗಿ ಗಮನಿಸಿದರೆ ಫೋಟೋ ಎಡಿಟ್ ಮಾಡಿದ್ದಾರೆ ಎಂಬುದು ತಿಳಿಯುತ್ತದೆ.
Advertisement
ಕರೀನಾ ಕಪೂರ್ ಅವರು ಏಪ್ರಿಲ್ 29ರಂದು ಮತದಾನ ಮಾಡಲು ಪುತ್ರ ತೈಮೂರ್ ನನ್ನು ಕರೆತಂದಿದ್ದರು. ಈ ವೇಳೆ ಕ್ಲಿಕ್ಕಿಸಿದ ಫೋಟೋವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಆದರೆ ಕೆಲ ಬಿಜೆಪಿ ಬೆಂಬಲಿಗರು ಈ ಫೋಟೋವನ್ನು ಎಡಿಟ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ ಎನ್ನುವುದು ಸ್ಪಷ್ಟವಾಗುತ್ತದೆ.
Advertisement
https://twitter.com/KareenaOnline/status/1122845658942181377
ಈ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ, ರಣ್‍ವೀರ್ ಸಿಂಗ್, ನಿವೃತ್ತ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಬಿಜೆಪಿ ಬೆಂಬಲಿಸುತ್ತಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಈ ರೀತಿಯ ತಂತ್ರದಿಂದ ಸೆಲಿಬ್ರೆಟಿಗಳ ಅಭಿಮಾನಿಗಳನ್ನು ಪಕ್ಷಕ್ಕೆ ಸೆಳೆಯುವ ತಂತ್ರ ನಡೆಯುತ್ತಿದೆ.
ಮಧ್ಯಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕರೀನಾ ಕಪೂರ್ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಹರಿದಾಡಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ನಟಿ, ನಾನು ಯಾವುದೇ ಕಾರಣಕ್ಕೂ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ನನ್ನ ಗುರಿ ಏನಿದ್ದರೂ ಸಿನಿಮಾ ರಂಗ ಮಾತ್ರ ಎಂದು ಹೇಳಿದ್ದರು.